ಕುಡಿಯುವ ನೀರಿನ ಪೂರೈಕೆಗೆ ಪ್ರಥಮಾದ್ಯತೆ ನೀಡಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
Notice at the District Disaster Management Authority meeting
ಲೋಕದರ್ಶನ ವರದಿ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಸೂಚನೆ
ಗದಗ 22: ಪ್ರಸ್ತುತ ಬೇಸಿಗೆ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಪ್ರಥಮಾದ್ಯತೆ ಮೇರೆಗೆ ಇಲಾಖಾಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತ ವಹಿಸಿ ಮಾತನಾಡಿದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಯುದ್ದೋಪಾದಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲು ತಯಾರಿ ಮಾಡಿಟ್ಟುಕೊಳ್ಳಬೇಕು.ಈಗಿರುವ ಬೋರ್‌ವೆಲ್‌ಗಳನ್ನು ರಿಪೇರಿ ಮಾಡಿಸಿ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.
ಬೇಸಿಗೆ ದಿನಗಳಲ್ಲಿ ಬಿಸಿಲಿನ ತಾಪದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಹಿರಿಯ ನಾಗರಿಕರು, ಗರ್ಭಿಣಿಯರು ಚಿಕ್ಕಮಕ್ಕಳಿಗೆ ಬಿಸಿಲಿನ ತಾಪಮಾನದಿಂದ ಆರೋಗ್ಯ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಅವರು ಮಾತನಾಡಿ ಬೇಸಿಗೆ ದಿನಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಂಭವವಿರುವುದರಿಂದ ಹೀಟ್‌ವೇವ್‌ನಿಂದ ಆರೋಗ್ಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದರು.
ಜಿಲ್ಲೆಯ ಜಿಗಳೂರು ಗ್ರಾಮದ ಹತ್ತಿರ ನಿರ್ಮಿಸಿರುವ ಜಲಸಂಗ್ರಹಗಾರ ಕೆರೆಯ ಸದ್ಯ ನೀರಿನ ಸಂಗ್ರಹಣಾ ಸಾಮರ್ಥ್ಯ 2510 ಎಂ ಎಲ್ ಡಿ (0.08 ಟಿಎಂಸಿ) ಇದೆ. ಆ ನೀರು ರೋಣ, ಗಜೇಂದ್ರಗಡ ಮತ್ತು ನರೇಗಲ್ ಪಟ್ಟಣಗಳಿಗೆ 7 ತಿಂಗಳಿಗೆ ಸಾಕಾಗುತ್ತದೆ. ನವಿಲು ತೀರ್ಥ ಡ್ಯಾಂ ದಲ್ಲಿ ( ಲೈವ್ ಸ್ಟೋರೇಜ್ ) 8.259 ಟಿಎಂಸಿ ನೀರು, ಭದ್ರಾ ಡ್ಯಾಂ ದಲ್ಲಿ ( ಲೈವ್ ಸ್ಟೋರೇಜ್ ) 25.548 ಟಿಎಂಸಿ ನೀರು , ಶಿಂಗಟಾಲೂರ ಬ್ಯಾರೇಜ್ ದಲ್ಲಿ ( ಲೈವ್ ಸ್ಟೋರೇಜ್ ) 1.828 ಟಿಎಂಸಿ ನೀರು ಸಂಗ್ರಹವಿರುತ್ತದೆ. ಪ್ರಸ್ತುತ ಲಭ್ಯವಿರುವ ನೀರು ಮುಂದಿನ 72 ದಿನಗಳಿಗೆ ಸಾಕಾಗಲಿದೆ ಎಂದು ಸಂಬಂಧಿತ ಅಧಿಕಾರಿಗಳು ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಒಟ್ಟು 55 ಗ್ರಾಮಗಳನ್ನು ಮುಂಜಾಗ್ರತೆಗಾಗಿ ಗುರುತಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಕಾರ್ಯನಿರ್ವಾಹಕ ಇಂಜನೀಯರ್ ಸಭೆಗೆ ತಿಳಿಸಿದರು. ನೀರಿನ ಸಮಸ್ಯೆ ಉದ್ಭವಿಸಬಹುದಾದ 9 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 60 ವಾರ್ಡುಗಳನ್ನು ಮುಂಜಾಗ್ರತೆಗಾಗಿ ಗುರುತಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರು ಕೊರತೆ ಆಗಬಹುದಾದ ವಾರ್ಡುಗಳಲ್ಲಿ ಒಪ್ಪಂದಕ್ಕಾಗಿ ಗುರುತಿಸಲಾದ ಹೆಚ್ಚಿನ ಇಳುವರಿ ನೀಡುವ 29 ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ ಸಭೆಗೆ ತಿಳಿಸಿದರು.
ಈ ಸಂದರ್ಬದಲ್ಲಿ ಡಿವೈಎಸ್‌ಪಿ ಮಹಾಂತೇಶ ಸಜ್ಜನರ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್.ಬುರುಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 