ಬೆಂಗಳೂರು, ಮೇ 7,ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಖಾಲಿ ಇರುವಂತ 1121 ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಸೂಚಿಸಿದೆ. ರಾಜ್ಯದ ಎಲ್ಲಾ ನಾಡಕಚೇರಿಗಳಿಗೆ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಟೆಂಡರ್ ಕರೆಯಲು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಜಿಲ್ಲಾ ಮಟ್ಟದಲ್ಲಿ ಟೆಂಡರ್ ಅನ್ನು ಕರೆಯುವ ಪ್ರಾಧಿಕಾರಿಯನ್ನಾಗಿ ಹಾಗೂ ಇ-ಟೆಂಡರ್ ಅಂತಿಮಗೊಳಿಸುವ ಹಾಗೂ ಇನ್ನಿತರೆ ಅನುಮೋದನೆಯನ್ನು ನೀಡಲು, ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿ ಸರ್ಕಾದ ಆದೇಶ ಹೊರಡಿಸಿದೆ.ಈಗಾಗಲೇ ಇ-ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಹಾಗೂ ಮುಂದಿನ ದಿನಗಳಲ್ಲಿ ಇ-ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸುವ ಜಿಲ್ಲೆಗಳಲ್ಲಿ ಸರ್ಕಾರದ ಆದೇಶದಂತೆ ಸಮಿತಿಯನ್ನು ರಚಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿದೆ.