ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ ಸೂಚನೆ
Notice from Principal Secretary, Department of Medical Education, Mohammad Mohsin
ವಿಜಯಪುರ 20: ವಿಜಯಪುರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ ಅವರು ಶನಿವಾರ ಪರೀಶೀಲನೆ ನಡೆಸಿದರು.
ಆಸ್ಪತ್ರೆ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು, ಕಾಮಗಾರಿಯಲ್ಲಿ ಗುಣಮಟ್ಟದ ಕಾಯ್ದುಕೊಳ್ಳಬೇಕು, ವೈದ್ಯರ ಸಲಹೆಯನ್ನು ಆಧರಿಸಿ ಕೊಠಡಿ ಮೊದಲಾದವುಗಳನ್ನು ನಿರ್ಮಿಸಿ ಎಂದರು.ಜನವರಿ 15 ರೊಳಗಾಗಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಇದು ವಿಜಯಪುರ ಜನತೆಗೆ ಉತ್ತಮ ಆರೋಗ್ಯ ಒದಗಿಸಲಿದ್ದು, ಚಿಕಿತ್ಸೆಗಾಗಿ ದೂರದ ಮೀರಜ್, ಸಾಂಗ್ಲಿ, ಸೊಲ್ಲಾಪೂರ ಮೊದಲಾದ ದೂರದ ಊರುಗಳಿಗೆ ಹೋಗುವುದು ತಪ್ಪುತ್ತದೆ, ಸುಲಭವಾಗಿ ಇಲ್ಲಿಯೇ ಚಿಕಿತ್ಸೆ ದೊರಕಲಿದೆ, ಸುಸಜ್ಜಿತ ವೈದ್ಯಕೀಯ ಉಪಕರಣ, ತಜ್ಞ ವೈದ್ಯರ ಸೇವೆ ಇಲ್ಲಿಗೆ ಲಭ್ಯವಾಗಲಿದೆ, ಈ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಾರ್ಡಿಯೋಲಾಜಿ, ಪ್ಲಾಸ್ಟಿಕ್ ಸರ್ಜರಿ, ನ್ಯೂರೋ ಸರ್ಜರಿ, ಸೇರಿದಂತೆ ಅನೇಕ ಮಹತ್ವದ ಚಿಕಿತ್ಸೆಗಳನ್ನು ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಒದಗಿಸಲಾಗುತ್ತಿದೆ ಎಂದರು.
ಜನರಿಗೆ ಅನುಕೂಲಕರವಾದ ಈ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದರು. ಆಸ್ಪತ್ರೆಯ ಉದ್ದೇಶ, ಕಾರ್ಯಯೋಜನೆಗಳ ಕುರಿತು ಸುದೀರ್ಘವಾಗಿ ವಿವರಿಸಿದರು. ಟ್ರಾಮಾ ಕೇಂದ್ರದ ಸೇವೆಯನ್ನು ಸಹ ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕೆ. ಆನಂದ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಆರೋಗ್ಯ. ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಡಾ.ಜಾವೀದ ಜಮಾದಾರ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಇಲಿಯಾಸ ಅಹ್ಮದ್ ಸಿದ್ದಿಕಿ, ಬಾಬಾಸಾಹೇಬ ವಿಜಯದಾರ, ಜಿಲ್ಲಾ ಆಸ್ಪತ್ರೆ ಸಲಹಾ ಸಮಿತಿ ಸದಸ್ಯರು, ವೈದ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 