ವಿಜಯಪುರ: 05- ಮುಂಬರುವ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕುಡಿಯುವ ನೀರಿನ ಪರಿಸ್ಥಿತಿ ಹಾಗೂ ಜಿಲ್ಲೆಯಲ್ಲಿ ಕೆರೆ ತುಂಬಿಸುವ ಯೋಜನೆ ಸಮರ್ಪಕ ಅನುಷ್ಠಾನ ಕುರಿತಂತೆ ವಿವಿಧ ನೀರಾವರಿ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಕೆರೆ ನೀರು ತುಂಬುವ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಂತರಜಲ ಹೆಚ್ಚಳಕ್ಕೆ ಹಾಗೂ ಕುಡಿಯಲು ಅನುಕೂಲವಾಗುವ ಹಿನ್ನಲೆಯಲ್ಲಿ ಆದ್ಯತೆ ಮೇಲೆ ವಿವಿಧ ಕೆರೆಗಳನ್ನು ತುಂಬಿಸುವ ದಿಸೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಆಲಮಟ್ಟಿ ಜಲಾಶಯ ವ್ಯಾಪ್ತಿ ಹಾಗೂ ರಾಂಪುರ ನೀರಾವರಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿವಿಧ ಕೆರೆಗಳ ಭತರ್ಿ ಪ್ರಗತಿ ಬಗ್ಗೆ ವರದಿ ಸಲ್ಲಿಸಬೇಕು. ಜಾರಿಯಲ್ಲಿರುವ ಕೆರೆ ಭತರ್ಿ ಕಾರ್ಯವನ್ನು ತೀವ್ರಗೊಳಿಸಬೇಕೆಂದು ತಿಳಿಸಿದ ಅವರು, ವಿವಿಧ ಕಾಲುವೆಗಳ ಮೂಲಕ ಕೆರೆಗಳನ್ನು ಭತರ್ಿ ಮಾಡುತ್ತಿರುವುದು ಸೇರಿದಂತೆ ಅನುಷ್ಠಾನಕ್ಕೆ ಕೈಗೊಳ್ಳಲಾದ ಕ್ರಮಗಳ ಮಾಹಿತಿಯನ್ನು ಸಲ್ಲಿಸಬೇಕು. ಶೀಘ್ರದಲ್ಲಿಯೇ ನೀರಾವರಿ ಸಲಹಾ ಸಮಿತಿ ಸಭೆ ನಡೆಯುವ ಹಿನ್ನಲೆಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಅವಶ್ಯಕತೆ ಹಾಗೂ ಜೂನ್ ಅಂತ್ಯದವರೆಗೆ ಕುಡಿಯಲು ನೀರು ಪೂರೈಕೆಗೆ ಸಂಬಂಧಪಟ್ಟಂತೆ ಕೈಗೊಳ್ಳಲಾಗುವ ಕ್ರಮಗಳ ಕುರಿತ ವರದಿಯನ್ನು ಸಿದ್ಧತೆಯಲ್ಲಿಟ್ಟುಕೊಳ್ಳುವಂತೆ ಸೂಚನೆ ನೀಡಿದರು.
ಅದರಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಅವರು ಮಾತನಾಡಿ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು, ಬಹುಹಳ್ಳಿ ಕುಡಿಯುವ ನೀರಿನ ಯೋಜನೆ, ವಿವಿಧ ಕೆರೆಗಳ ಭತರ್ಿಯಿಂದ ಆಗುವ ಅಂತರಜಲ ಹೆಚ್ಚಳ ಕ್ರಮಗಳಿಗೆ ಆದ್ಯತೆ ನೀಡಬೇಕು. ಅದರಂತೆ ಆಯಾ ಕೆರೆಗಳಿಗೆ ಕಾಲುವೆಗಳ ಮೂಲಕ ನೀರು ಭತರ್ಿಗೆ ಸಂಬಂಧಿಸಿದಂತೆ ಎಷ್ಟು ಪ್ರಮಾಣದ ನೀರಿನ ಅವಶ್ಯಕತೆ, ಕುಡಿಯುವ ನೀರಿನ ಅವಶ್ಯಕತೆ, ಸೇರಿದಂತೆ ಇನ್ನಿತರ ವರದಿಯನ್ನು ಸಿದ್ಧಪಡಿಸಿಕೊಳ್ಳುವ ಜೊತೆಗೆ ಕೆರೆಗಳ ಸಂರಕ್ಷಣಾ ಕ್ರಮಗಳನ್ನು ಸಹ ಕೈಗೊಳ್ಳಬೇಕು. ವಿವಿಧ ಕೆರೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಆದ್ಯತೆ ಮೇಲೆ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ, ನಗರಾಭಿವೃದ್ದಿ ಕೋಶದ ಯೋಜನಾ ನಿದರ್ೇಶಕ ಮಹಾದೇವ ಮುರಗಿ, ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಹೆಸ್ಕಾಂ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.