ಅಂತಿಮ ಸಿದ್ಧತೆಗಳ ಪರೀಶೀಲಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸೂಚನೆ
Notice to District Collector Nagendra Prasad to check the final preparations
ಬಳ್ಳಾರಿ 11: ಇದೇ ನ.13 ರಿಂದ 18 ರ ವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರಾ್ಯಲಿ ಯಶಸ್ವಿಗೊಳಿಸಲು, ಎಲ್ಲಾ ಇಲಾಖೆಗಳ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದುಕೊಂಡು ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಮಂಗಳವಾರ ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರಾ್ಯಲಿಯ ಅಂತಿಮ ಸಿದ್ಧತೆ ಕುರಿತು ಏರಿ್ಡಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ದೇಶದ ಸೈನ್ಯದಲ್ಲಿ ಸೇರಬಯಸುವ ಅಗ್ನಿವೀರರ ಆಯ್ಕೆ ಪ್ರಕ್ರಿಯೆಯು ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ ಮತ್ತು ನಮಗೆ ದೊರೆತ ಅವಕಾಶವಾಗಿದೆ. ಹಾಗಾಗಿ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸುವ ಮೂಲಕ ಯಾವುದೇ ರೀತಿಯಲ್ಲಿ ಅಡಚಣೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
*ಸಹಾಯವಾಣಿ ಕೇಂದ್ರ:*
ನ.13 ರಿಂದ 18 ರ ವರೆಗೆ ನಡೆಯುವ ರಾ್ಯಲಿಯಲ್ಲಿ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಗ್ನಿವೀರರು ರಾಜ್ಯದ ವಿವಿಧೆಡೆಯಿಂದ ಆಗಮಿಸಲಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ನಿರ್ಮಿಸಲಾಗುವ ಸಹಾಯವಾಣಿ ಕೇಂದ್ರಗಳ ಮೂಲಕ ರಾ್ಯಲಿ ನಡೆಯುವ ಸ್ಥಳಕ್ಕೆ ತಲುಪಲು ಸ್ಥಳದ ಮಾಹಿತಿ ನೀಡಬೇಕು. ಅಗತ್ಯವಾದಲ್ಲಿ ನಿಯೋಜಿಸಿರುವ ಬಸ್ ಗಳ ಮೂಲಕ ಕರೆತರಬೇಕು. ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 