ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್: ಬಾಯಕ್ಕ ಮೇಟಿ

ಬಾಗಲಕೋಟೆ: ಜಿಲ್ಲಾ ಪಂಚಾಯತ ಮಾಸಿಕ ಕೆಡಿಪಿ ಸಭೆಗೆ ಅನುಮತಿ ಪಡೆಯದೇ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡುವಂತೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಜಿ.ಪಂ ಸಿಇಓ ಅವರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಜರುಗಿದ ಆಗಸ್ಟ ಮಾಹೆಯ ಕನರ್ಾಟಕ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಯೊಂದು ಸಭೆಗೆ ಸ್ವತಃ ಅಧಿಕಾರಿಗಳೇ ಹಾಜರಾಗಬೇಕು. ಅನಿವಾರ್ಯ ಕಾರಣಗಳಿದ್ದಲ್ಲಿ ಸಂಬಂದಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆದು ತಮ್ಮ ಪ್ರತಿನಿಧಿಗಳನ್ನು ಕಳುಹಿಸತಕ್ಕದ್ದು. ಇಲ್ಲವಾದಲ್ಲಿ ಅವರ ಮೇಲೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಅನುಮತಿ ಇಲ್ಲದೇ ಗೈರು ಹಾಜರಾದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡುವಂತೆ ಸೂಚಿಸಿದರು.

ನಂತರ ಕಳೆದ ಜೂನ್ ಮಾಹೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಡುವಳಿಗಳ ಮೇಲಿನ ಅನುಸರಣಾ ವರದಿ ಬಗ್ಗೆ ಚಚರ್ಿಸಲಾಯಿತು. ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಗಳ 2018-19ನೇ ಸಾಲಿನಲ್ಲಿ ಒಟ್ಟು 157 ಫಲಾನುಭವಿಗಳು ಇದರ ಪ್ರಯೋಜನ ಪಡೆದಿದ್ದು, ಬೀಜ ವಿತರಣೆ ವೇಳೆಯಲ್ಲಿ ಜನಪ್ರತಿನಿದಿಗಳ ಗಮನಕ್ಕೆ ತರಲು ಆಯಾ ತಾಲೂಕಾ ಅಧಿಕಾರಿಗಳಿಗೆ ಸೂಚಿಸಿದಲಾಗಿದೆ ಎಂದು ತೋಟಗಾರಿಕೆ ಉಪನಿದರ್ೇಶಕ ಪ್ರಭುರಾಜ ಹಿರೇಮಠ ತಿಳಿಸಿದರು. ನಡೆತೋಪು ನಿಮರ್ಾಣ, ನಿರ್ವಹಣೆ ಹಾಗೂ ಮುಂಗಳ ಕಾಮಗಾರಿಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛಮೇವ ಜಯತೆ ಆಂದೋಲನದಡಿ ವೈಯಕ್ತಿಕ ಶೌಚಾಲಯಗಳ ಬಳಕೆಮತ್ತು ಸುಸ್ಥಿರತೆ ಕುರಿತು ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೇಸ್ಲೈನ್ ಸಮೀಕ್ಷೆಯಿಂದ ಹೊರಗುಳಿದ ಕುಟುಂಬಗಳಿಗೆ ಶೌಚಾಲಯದ ಸೌಲಭ್ಯ ನೀಡಲಾಗುತ್ತಿದ್ದು, ಇಲ್ಲಿವರೆಗೆ 2269 ಕುಟುಂಬಗಳಿಗೆ ಪ್ರೋತ್ಸಾಹಧನ ನೀಡಲಾಗಿದೆ. ಇನ್ನುಳಿದ ಕುಟುಂಬಗಳಿಗೆ ಸಪ್ಟಂಬರ ಮಾಹೆಯ ಅಂತ್ಯಕ್ಕೆ ಶೌಚಾಲಯ ಸೌಲಭ್ಯ ಕಲ್ಪಿಸಲಾಗುವುದೆಂದು ಸಭೆಗೆ ತಿಳಿಸಲಾಯಿತು.

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಸ್ಯಾನಿಟರಿ ನ್ಯಾಪಕಿನ್ ಘಟಕ ಸ್ಥಾಪನೆಗೆ ಬಂದ ಅಜರ್ಿಗಳನ್ನು ಪರಿಶೀಲಿಸಲಾಗಿ ಬ್ಯಾಂಕಿನಿಂದ ಸಾಲ ಪಡೆದು ಘಟಕ ನಿಮರ್ಿಸಿದಲ್ಲಿ ಸಹಾಯಧನವನ್ನು ಮಂಜೂರು ಮಾಡಲಾಗುವುದು. ಎಸ್ಸಿ, ಎಸ್ಟಿ ಅವರಿಗೆ ಶೇ90 ರಷ್ಟು ಹಾಗು ಇತರೆ ಶೇ.30 ರಷ್ಟು ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸದರು. ಜಿಲ್ಲೆಯಲ್ಲಿ ಒಟ್ಟು 158 ಕೆರೆಗಳು ಇರುವ ಬಗ್ಗೆ ಸಮೀಕ್ಷೆಯಿಂದ ಮಾಹಿತಿ ಪಡೆಯಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಕೆರೆ ಸಂಜೀವಿನಿ, ಜಲಾಮೃತ ಯೋಜನೆಯಡಿ ಬಾದಾಮಿ, ಹುನಗುಂದ, ಬೀಳಗಿ ಮತ್ತು ಮುಧೋಳ ತಾಲೂಕಿನ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿರುತ್ತದೆ ಎಂದು ಕಾರ್ಯನಿವಾಹಕ ಅಭಿಯಂತರ ವಿಜಯಕುಮಾರ ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ರಾತ್ರಿ ವೇಳೆಯಲ್ಲಿ 4 ಜನ ಸ್ತ್ರೀರೋಗ ತಜ್ಞರು ಕಾರ್ಯನಿರ್ವಹಿಸುತ್ತಿದ್ದು, ಸಿಜರಿನ್ ಮಾಡುವ ವ್ಯವಸ್ಥೆ ಕೈಗೊಳ್ಳಲಾಗಿದೆ. ತಾಲೂಕ ಮಟ್ಟದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ಅರಿವು ಮೂಡಿಸುವ ಕಾರ್ಯಕ್ರಮ, ಪ್ರತಿ ತಿಂಗಳು ಜಿಲ್ಲಾ ಕುಷ್ಠರೋಗ ಅಧಿಕಾರಿಗಳು ಕುಷ್ಟರೋಗಗಳಿಗೆ ಕಾಲೋನಿಗಳಿಗೆ ಭೇಟಿ ನೀಡಿ ಉಪಚಾತ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ ಸಭೆಗೆ ತಿಳಿಸಿದರು. ನಂತರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು.

ಸಭೆಯಲ್ಲಿ ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಜಿಲ್ಲಾ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕವಿತಾ ದಡ್ಡಿ, ಸುಜಾತಾ ಸಿಂಗಾಡೆ, ಶೋಭಾ ಪಾಟೀಲ, ಜಿ.ಪಂ ಉಪಕಾರ್ಯದಶರ್ಿ ಎ.ಜಿ.ತೋಟದ, ಯೋಜನಾ ನಿದರ್ೇಶಕ ವಿ.ಎಸ್.ಹಿರೇಮಠ, ಮುಖ್ಯಲೆಕ್ಕಾಧಿಕಾರಿ ಶಾಂತಾ ಕಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.