ಕನಿಷ್ಠ ವೇತನ ಪರಿಷ್ಕರಣೆ ತಕ್ಷಣ ಜಾರಿಗೆ ಬರುವಂತೆ ಅಧಿಸೂಚನೆ: ಕಾರ್ಮಿಕರ ಹೋರಾಟಕ್ಕೆ ಸಂದ ಜಯ
Notification to implement minimum wage revision immediately: Victory for workers' struggle
ಲೋಕದರ್ಶನ ವರದಿ
ಯಾದಗಿರಿ 23: ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯದ ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಹೊರಡಿಸಿರುವುದನ್ನು ಎಆಯ್‌ಯುಟಿಯುಸಿ ರಾಜ್ಯ ಸಮಿತಿಯು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತದೆ. ಇದು ಕಾರ್ಮಿಕ ವರ್ಗದ ದೃಢ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ.
ತೀವ್ರ ಸಂಕಷ್ಟದಲ್ಲಿರುವ ಕಾರ್ಮಿಕ ವರ್ಗಕ್ಕೆ ವೇತನ ಹೆಚ್ಚಿಸುವಂತೆ ಅನೇಕ ಬಾರಿ ಸ್ವತಂತ್ರವಾಗಿ ಹಾಗೂ ಇತರ ಕಾರ್ಮಿಕ ಸಂಘಗಳೊಂದಿಗೆ ಸೇರಿ ಜಂಟಿ ಹೋರಾಟ ಮಾಡಿದ್ದನ್ನು, ಇತ್ತೀಚೆಗೆ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಬೃಹತ್ ಹೋರಾಟ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಇಂದಿನ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚಕ್ಕೆ ಅನುಗುಣವಾಗಿ ಕಾರ್ಮಿಕರಿಗೆ ಕನಿಷ್ಠ 36,000 ವೇತನ ನಿಗದಿಪಡಿಸಬೇಕೆಂದು ಕಾರ್ಮಿಕ ಸಂಘಟನೆಗಳು ನಿರಂತರವಾಗಿ ಒತ್ತಾಯಿಸುತ್ತಾ ಬಂದಿದ್ದವು. ಆದರೆ ಮಾಲೀಕ ವರ್ಗವು ಇದಕ್ಕೆ ತೀವ್ರ ಅಡ್ಡಿಪಡಿಸಿ, ನ್ಯಾಯಾಲಯದ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್ನ ಐತಿಹಾಸಿಕ ‘ರೆಪ್ತಕೋಸ್ ಬ್ರೆಟ್ ಆಂಡ್ ಕಂ’ ಪ್ರಕರಣದ ಮಾನದಂಡಗಳನ್ನು ಆಧರಿಸಿ ವೇತನ ನಿಗದಿಪಡಿಸಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದ್ದು, ಕಾರ್ಮಿಕರ ಹೋರಾಟಕ್ಕೆ ಕಾನೂನಾತ್ಮಕ ಬಲ ದೊರೆತಂತಾಗಿತ್ತು. '
ಕನಿಷ್ಠ ವೇತನ ಸಲಹಾ ಮಂಡಳಿಯಲ್ಲಿ ನಡೆದ ಹಲವಾರು ಸುತ್ತಿನ ತೀವ್ರ ಚರ್ಚೆಗಳ ನಂತರ ಈ ವೇತನ ಹೆಚ್ಚಳದ ಶಿಫಾರಸ್ಸನ್ನು ಸಲ್ಲಿಸಿದ್ದರೂ ಸಹ, ಮಾಲೀಕ ವರ್ಗದ ಒತ್ತಡಕ್ಕೆ ಮಣಿದಿದ್ದ ಸರ್ಕಾರವು ಆದೇಶ ಜಾರಿ ಮಾಡಲು ಮೀನಾಮೇಷ ಎಣಿಸುತ್ತಿತ್ತು. ಇದನ್ನು ಪ್ರತಿಭಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ಇದೇ ಮೇ 27 ರಂದು ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟಕ್ಕೆ ಕರೆ ನೀಡಿತ್ತು. ಹೋರಾಟದ ತೀವ್ರತೆಯನ್ನು ಅರಿತ ಸರ್ಕಾರವು ಕೊನೆಗೂ ಮಣಿದು, ಈ ಆದೇಶವನ್ನು ಹೊರಡಿಸಿದೆ.
ಇದು ಕಾರ್ಮಿಕರ ಹೋರಾಟದ ಶಕ್ತಿಗೆ ಸಿಕ್ಕ ಪ್ರತಿಫಲವಾಗಿದೆ. ಆದರೆ ಗಾರ್ಮೆಂಟ್ ಹಾಗೂ ಪ್ಲಾಂಟೇಷನ್ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಈ ಪರಿಷ್ಕರಣೆಯಿಂದ ಹೊರಗೆ ಇಟ್ಟಿರುವುದು, ರಾಜ್ಯದಲ್ಲಿನ ಬಹುದೊಡ್ಡ ಕಾರ್ಮಿಕ ಸಮೂಹ, ಅದರಲ್ಲೂ ವಿಶೇಷವಾಗಿ ಮಹಿಳಾ ಕಾರ್ಮಿಕರನ್ನು ವೇತನ ಹೆಚ್ಚಳದಿಂದ ವಂಚಿತಗೊಳಿಸಿರುವುದು ಖಂಡನಾರ್ಹ. ತಕ್ಷಣವೇ ಈ ಕಾರ್ಮಿಕರ ಕನಿಷ್ಟ ವೇತನ ಪರಿಷ್ಕರಿಸಬೇಕೆಂದು ರಾಜ್ಯ ಸಮಿತಿಯು ಆಗ್ರಹಿಸುತ್ತದೆ.
"ಜೊತೆಗೆ ಸರ್ಕಾರದ ಈ ಆದೇಶ ಕೇವಲ ಕಾಗದದ ಮೇಲಿದ್ದರೆ ಸಾಲದು. ಎಲ್ಲಾ ಅನುಸೂಚಿತ ಉದ್ಯಮಗಳ ಮಾಲೀಕರು ಈ ಪರಿಷ್ಕೃತ ಕನಿಷ್ಠ ವೇತನವನ್ನು ತಕ್ಷಣದಿಂದಲೇ ಜಾರಿಗೊಳಿಸಬೇಕು. ಯಾವುದೇ ಕಾರಣಕ್ಕೂ ಮಾಲೀಕ ವರ್ಗದ ಆರ್ಥಿಕ ಒತ್ತಡಕ್ಕೆ ಮಣಿಯದೇ, ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಮಾಡಲು ಕಾರ್ಮಿಕರು ಸದಾ ಜಾಗರೂಕರಾಗಿರಬೇಕು ಮತ್ತು ಒಗ್ಗಟ್ಟಿನಿಂದ ನಿಲ್ಲಬೇಕು." ಎಂದು ಂಋಖಿಗಅ ರಾಜ್ಯದ ಸಮಸ್ತ ಕಾರ್ಮಿಕ ವರ್ಗಕ್ಕೆ ಕರೆ ನೀಡುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 