ಸಮರ್ಪಕ ನೀರಿನ ಪೂರೈಕೆಗೆ ಅಧಿಕಾರಿಗಳಿಗೆ ಸೂಚನೆ ಜನರು ಗುಳೆಹೋಗದಂತೆ ಸ್ಥಳೀಯವಾಗಿ ಖಾತ್ರಿಯೋಜನೆಯಡಿ ಕೆಲಸ ನೀಡಿ: ಜಿಲ್ಲಾಧಿಕಾರಿ
ಹಾವೇರಿ.04: ಜಿಲ್ಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಉದ್ಯೋಗ ನೀಡಲು ಆದ್ಯತೆಯ ಕೆಲಸವಾಗಿ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ಜರುಗಿದ ಬರಪರಿಸ್ಥಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದು ನೀರು ಪೂರೈಸಬೇಕು ಹಾಗೂ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಆಯಾ ತಾಲೂಕಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿವರ್ಾಹಕ ಇಂಜನೀಯರ್, ತಾಲೂಕು ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸದಾ ನಿಗಾವಹಿಸಬೇಕು ಎಂದು ಸೂಚಿಸಿದರು.
ಕುಡಿಯುವ ನೀರು ಪೂರೈಕೆಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಬಿಡುಗಡೆ ಮಾಡಿದ ನೀರನ್ನು ಕೃಷಿ ಬಳಕೆಗೆ ಉಪಯೋಗಿಸದಂತೆ ಎಚ್ಚರವಹಿಸಬೇಕು ಹಾಗೂ ನದಿಪಾತ್ರದ ಪಂಪಸೆಟ್ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಮಳೆಗಾಲ ಪ್ರಾರಂಭವಾಗುವವರೆಗೆ ಜಿಲ್ಲೆಯಲ್ಲಿ ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪಶು ಪಾಲನಾ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಬರಪರಿಸ್ಥಿತಿಯಲ್ಲಿ ಕೂಲಿಕಾರರಿಗೆ ಉದ್ಯೋಗ ಅರಿಸಿ ಗುಳೆ ಹೋಗುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚು ಹೆಚ್ಚು ಕಾಮಗಾರಿಗಳನ್ನು ಸೃಜಿಸಿ ಕೂಲಿಕಾರರಿಗೆ ಉದ್ಯೋಗ ಒದಗಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ 3.26 ಲಕ್ಷ ಮೆಟ್ರಿಕ್ ಟನ್ ಮೇವು 25 ವಾರಗಳಿಗೆ ಸಾಕಾಗುಷ್ಟು ದಾಸ್ತಾನು ಇದೆ. ಸಾಕಷ್ಟು ಪ್ರಮಾಣದಲ್ಲಿ ಮೇವು ಲಭ್ಯವಿರುವುದರಿಂದ ಮೇವು ಬ್ಯಾಂಕ್ ಹಾಗೂ ಗೋಶಾಲೆಗಳನ್ನು ಆರಂಬಿಸುವುದು ಸದ್ಯ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಕಂಡುಬಂದರೆ ಮೇವು ಬ್ಯಾಂಕ್ಗಳನ್ನು ಸ್ಥಾಪಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 