ನುಲಿಯ ಚಂದಯ್ಯ ಜಯಂತಿ; ಕಾಯಕ ತತ್ವದ ಮಹತ್ವ ಸಾರಿದ ಶರಣ ಡಾ.ಕಾಂತೇಶ ಭಜಂತ್ರಿ
Nuliyya Chandayya Jayanti: Byadgi news
ಬ್ಯಾಡಗಿ 12 : ‘ಕಾಯಕನಿಷ್ಠ ಯೋಗಿ ಶಿವಶರಣ ನುಲಿಯ ಚಂದಯ್ಯನವರು ಶ್ರೇಷ್ಠ ವಚನಕಾರರು. ತಮ್ಮ ವಚನಗಳ ಮೂಲಕ ಕಾಯಕದ ಮಹತ್ವ ಸಾರಿದ್ದಾರೆ’ ಎಂದು ಸಮಾಜದವರಾದ ತಾಲೂಕು ಆರೋಗ್ಯ ಇಲಾಖೆಯ ಅಧಿಕಾರಿ ಡಾ.ಕಾಂತೇಶ ಭಜಂತ್ರಿ ಹೇಳಿದರು.
ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ನುಲಿಯ ಚಂದಯ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮಾತನಾಡಿದರು.‘ಕಾಯಕ ಹಾಗೂ ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿದವರಲ್ಲಿ ನುಲಿಯ ಚಂದಯ್ಯರೂ ಒಬ್ಬರಾಗಿದ್ದಾರೆ. ಅವರು ಸುಮಾರು 48 ವಚನಗಳನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದ್ದಾರೆ’ ಸಮಾಜದ ನಿದಿ್ದೂಹಿಳ್ಮದಿ್ದೂ ತಿದ್ದುವಲ್ಲಿ ಹಾಗೂ ಸಮಾಜ ಸುಧಾರಣೆಯಲ್ಲಿ ಅವರ ವಚನಗಳು ದಾರೀದೀಪವಾಗಿವೆ.ನುಡಿದಂತೆ ನಡೆದ ವಚನಕಾರ ನುಲಿಯ ಚಂದಯ್ಯನವರು, ಬಸವಣ್ಣನವರ ಕಾಯಕವೇ ಕೈಲಾಸ ಆಶಯವನ್ನು ಅಕ್ಷರಶಃ ತನ್ನ ಬದುಕಿನಲ್ಲಿ ಅನುಸರಿಸಿದ ಅವರ ಬದುಕು ಇಡೀ ಸಮಾಜ ಹಾಗೂ ಜಗತ್ತಿಗೆ ಮಾದರಿಯಾಗಿದೆ’ ತಳವರ್ಗಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮುಖ್ಯವಾಹಿನಿಗೆ ಬರಬೇಕು’ ಎಂದು ಸಲಹೆ ನೀಡಿದರು. ‘12ನೇ ಶತಮಾನದಲ್ಲಿ ಕಾಯಕಕ್ಕೆ ಒತ್ತು ನೀಡುವ ಮೂಲಕ ಕೊರಮ ಸಮುದಾಯದ ಸಾಂಸ್ಕೃತಿಕ ಪ್ರತಿನಿಧಿಯಾಗಿದ್ದಾರೆ. ಕಾಯಕದ ಮಹತ್ವ ಸಾರಿದ ನುಲಿಯ ಚಂದಯ್ಯನವರು ಕಾಯಕದಲ್ಲಿಯೇ ದೇವರನ್ನು ಕಂಡ ಮಹಾಶರಣರಾಗಿದ್ದಾರೆ’ ಎಂದು ಕೊರಮ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ ಬ ಭಜಂತ್ರಿ ಹೇಳಿದರು.
ತಹಶೀಲ್ದಾರ್ ಇಲಾಖೆಯ ಸಿಬ್ಬಂದಿ ನಾಗರಾಜ್ ಗುಳೇರ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಸಮಾಜದ ಮುಖಂಡರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 