ಪೋಷನ ಅಭಿಯಾನ ಸಭೆ
Nutrition campaign meeting
ಪೋಷನ ಅಭಿಯಾನ ಸಭೆ
ಆಲಮಟ್ಟಿ 18: ಬೆಂಗಳೂರಿನಲ್ಲಿ ಸೋಮವಾರ ಐಎಎಸ್ ಅಧಿಕಾರಿ ಗೌರವ ಗುಪ್ತ ಎಸಿಎಸ್ ರವರ ನೇತೃತ್ವದಲ್ಲಿ ನಡೆದ ಮಧ್ಯಾಹ್ನದ ಉಪಹಾರ ಯೋಜನಾ ಸಮಿತಿ ಸಭೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಭಾಗ ವಹಿಸಿ ಬಿಸಿಯೂಟ ಯೋಜನೆಯ ಹಲವಾರು ಪ್ರಮುಖ ವಿಷಯ ಕುರಿತು ಚರ್ಚಿಸಿದರು.
ಪಿಎಂ ಪೋಷನ್ ಅಭಿಯಾನ ಸಭೆಯಲ್ಲಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ ನಾಗೇಶ, ರಾಜ್ಯಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿದಂತೆ ಸಂಘದ ಪ್ರಮುಖರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿನ ಒತ್ತಡಗಳ ಬಗ್ಗೆ ಸುದೀರ್ಘ ಚರ್ಚಿಸಲಾಯಿತು. ಮೊಟ್ಟೆ ದರ ಹೆಚ್ಚಿಸುವ ಬಗ್ಗೆ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಬಿಸಿಯೂಟ ಯೋಜನೆ ವಿಸ್ತರಿಸುವ ಕುರಿತು ಸಮಾಲೋಚನೆ ನಡೆಯಿತು. ಬೇಸಿಗೆ ರಜೆಯಲ್ಲಿ ಬಿಸಿಯೂಟ ಕೆಲಸ ನಿರ್ವಹಿಸುವ ಶಿಕ್ಷಕರಿಗೆ ಗಳಿಕೆ ರಜೆ ನೀಡಬೇಕೆಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿಕೊಂಡರು.
ಅಡುಗೆ ವೆಚ್ಚ ಬದಲಾವಣೆಯಾದ ಕುರಿತು ಹಾಗೂ ಇನ್ನಿತರ ಮಧ್ಯಾಹ್ನ ಉಪಹಾರ ಯೋಜನೆಯ ಚಟುವಟಿಕೆಗಳ ಬಗ್ಗೆ ಮೇಲಾಧಿಕಾರಿಗಳ ಗಮನ ಸೆಳೆಯಲಾಯಿತು. 60 ವರ್ಷ ವಯೋಮಿತಿ ತುಂಬಿದ ಮೇಲೆ ಅಡುಗೆ ಸಿಬ್ಬಂದಿಗಳಿಗೆ ಹಾಗೂ 15 ವರ್ಷ ಕೆಲಸ ಮಾಡಿದರೆ 30,000 ರೂ, ಮತ್ತು 15 ವರ್ಷಕ್ಕಿಂತ ಹೆಚ್ಚು ಅವಧಿಗಳ ಕಾಲದವರೆಗೆ ಕೆಲಸ ಮಾಡಿದ ಸಿಬ್ಬಂದಿಯವರಿಗೆ 40,000 ರೂ, ನೀಡುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಎಸಿಎಸ್ ಅಧಿಕಾರಿ ಗೌರವ ಗುಪ್ತ ಐಎಎಸ್ ರವರು, ಐಎಎಸ್ ಅಧಿಕಾರಿಗಳಾದ ರಶ್ಮಿ ಮೇಡಂ, ಡಾ, ತ್ರೀಲೋಕ ಚಂದ್ರ, ಕುರ್ಮಾರಾವ್ ಸೇರಿದಂತೆ ವಿವಿಧ ಅಧಿಕಾರಿಗಳು ಎನ್.ಜಿ.ಓ ಸಂಘಟನೆಯ ತೇಜಸ್ವಿನಿ ಅನಂತಕುಮಾರ, ಹುಕ್ಕೇರಿ ಸ್ವಾಮೀಜಿಯವರು, ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಟೋ : ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಉಪಹಾರ ಯೋಜನಾ ಸಮಿತಿ ಸಭೆ ಜರುಗಿತು.ಸಭೆಯಲ್ಲಿ ಕನಾ9ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ ನಾಗೇಶ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿದಂತೆ ವಿವಿಧ ಸಂಘಟನೆಯ ಪ್ರಮುಖರು ಭಾಗವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 