ಧರ್ಮಸ್ಥಳ ಸಂಘದಿಂದ ಪೌಷ್ಟಿಕ ಆಹಾರ ಮಾಹಿತಿ ಶಿಬಿರ
Nutritional information camp by Dharmasthala Sangha
ನೇಸರಗಿ, 13 ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವನ್ನೂರ ಗ್ರಾಮದಲ್ಲಿ ಸಂಕಲ್ಪ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ ಬುಧವಾರದಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಅಭಿವೃದ್ಧಿ ಅಧಿಕಾರಿ ಶಿವಾನಂದ ಕೊಳದೂರ, ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀನಿವಾಸ್ ಕುಲಕರ್ಣಿ, ಎಸ್ ಬಿ ಹುದ್ದಾರ, ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಮಂಜುಳಾ ಪಾಟೀಲ, ಈಶ್ವರ್ ಹೊಸಮನಿ, ರುದ್ರ್ಪ ಪಾಟೀಲ, ತಾಲೂಕಿನ ಜ್ಞಾನವಿಕಾಸ ಸಮನ್ವೇಧಿಕಾರಿ ಶೈಲಾ ಜೆ ಅವರುಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಕುಲಕರ್ಣಿ ಮಾತನಾಡಿ ಪೌಷ್ಟಿಕ ಆಹಾರ ಸೇವನೆ, ಸಿರಿಧಾನ್ಯಗಳ ಬಳಕೆ, ಸಿರಿಧಾನ್ಯಗಳನ್ನು ಉಪಯೋಗಿಸುವುದರಿಂದ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು.ಪೌಷ್ಟಿಕ ಆಹಾರ ಸೇವನೆ, ನಿತ್ಯ ಜೀವನದಲ್ಲಿ ಸಿರಿಧಾನ್ಯ, ಹಸಿರು ತರಕಾರಿ ಸೊಪ್ಪು, ಇದರಲ್ಲಿ ಸಿಗುವಂತ ವಿಟಮಿನ್ ಪೌಷ್ಠಿಕವಾಗಿ, ಪರಿಸರ ಮತ್ತು ನೈತಿಕವಾಗಿ ಒಳ್ಳೆಯದು. ಸಿರಿಧಾನ್ಯಗಳ ವಿಧಗಳು, ಅವುಗಳಿಂದ ಆರೋಗ್ಯಕ್ಕೆ ಇರುವ ಪ್ರಯೋಜನಗಳ ಬಗ್ಗೆ ಗರ್ಭಿಣಿಯರಿಗೆ ವಯಸ್ಕರರಿಗೆ ವೃದ್ಧರಿಗೆ ಬಳಕೆ ಮಾಡುವ ಸಿರಿಧಾನ್ಯವು ಪೌಷ್ಟಿಕಾಂಶದ ಧಾನ್ಯಗಳಲ್ಲಿ ಒಂದಾಗಿದೆ, ಏಕೆಂದರೆ ಇದು ಕಬ್ಬಿಣ, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು, ಆಹಾರದ ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಫೋಲೇಟ್ - ಗರ್ಭಾವಸ್ಥೆಯಲ್ಲಿ ಹೆಚ್ಚು ಅಗತ್ಯವಿರುವ ಎಲ್ಲಾ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದರ ಹೆಚ್ಚಿನ ಕಬ್ಬಿಣದ ಅಂಶವು ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸುತ್ತದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪೌಷ್ಟಿಕ ಆಹಾರ ತಯಾರಿಯನ್ನು ಪ್ರಾತ್ಯಕ್ಷಿತೆ ಮೂಲಕ ಮಾಡಲಾಯಿತು.
ಕಾರ್ಯಕ್ರಮದ ನಿರೂಪಣೆ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶೈಲಾ ಜೆ, ಸ್ವಾಗತ ಆಶಾ ಸೇವಾಪ್ರತಿನಿಧಿ ನೆರವೇರಿಸಿದರು. ಮೀನಾಕ್ಷಿ ವಂದಿಸಿದರು. ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 