ದೇಹದ ಬೆಳವಣಿಗೆಗೆ ಪೌಷ್ಠಿಕ ಆಹಾರ ಮುಖ್ಯ: ನ್ಯಾ. ದರಗದ
Nutritious food is important for the growth of the body: Justice Dargada
ಲೋಕದರ್ಶನ ವರದಿ
ದೇಹದ ಬೆಳವಣಿಗೆಗೆ ಪೌಷ್ಠಿಕ ಆಹಾರ ಮುಖ್ಯ: ನ್ಯಾ. ದರಗದ
ಕೊಪ್ಪಳ 13: ಪೌಷ್ಟಿಕ ಆಹಾರವನ್ನು ಕ್ರಮಬದ್ದವಾಗಿ ಸೇವನೆ ಮಾಡಬೇಕು. ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಪೌಷ್ಟಿಕ ಆಹಾರ ಸೇವನೆ ತುಂಬಾ ಮುಖ್ಯ. ಆಹಾರದಲ್ಲಿ ವೈವಿಧ್ಯೆತೆ ಕಂಡುಕೊಳ್ಳಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ಮಹಾಂತೇಶ ದರಗದ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಸೋಮವಾರದಂದು ಕೊಪ್ಪಳ ಯೋಜನೆಯ ಭಾಗ್ಯನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ 8ನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾರೋಪ ಕಾರ್ಯಕ್ರಮವನ್ನು ಹಾಗೂ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಹೊನ್ನೂರುಸಾಬ ಭೈರಾಪುರ ಅವರು ಮಾತನಾಡಿ, ಮಕ್ಕಳು ಮತ್ತು ಮಹಿಳೆಯರು ಸಧೃಡವಾಗಿ ಮತ್ತು ಆರೋಗ್ಯವಾಗಿದ್ದರೆ ದೇಶದ ನಿರ್ಮಾಣ ಮಾಡಬಹುದು. ಜಂಕ್‌ಫುಡ್ ನಿರಾಕರಣೆ ಮಾಡಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ್ ಅಧ್ಯಕ್ಷ ತುಕಾರಾಮಪ್ಪ ಗಡಾದ, ಭಾಗ್ಯನಗರ ಪ.ಪಂ. ಮುಖ್ಯಾಧಿಕಾರಿ ಸುರೇಶ ಬಬಲಾದ, ಶಿವಶರಣಪ್ಪ ಗದ್ದಿ ಮತ್ತು ರೂಪ ಗಂಧದ, ಭಾಗ್ಯನಗರ ವಲಯದ ಮೇಲ್ವಿಚಾರಕಿ ರೋಜಾ ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕರು, ಕಾರ್ಯಕ್ರಮದ ರೂವಾರಿಗಳಾದ ಗರ್ಭಿಣಿಯರು, ಬಾಣಂತಿಯರು, ತಾಯಂದಿರು, ಮುದ್ದು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸೀಮಂತ, ಅನ್ನಪ್ರಾಶನ ಕಾರ್ಯಕ್ರಮ ಹಾಗೂ ವೇಷಭೂಷಣ ಸ್ಪರ್ಧೆ ಏರಿ್ಡಸಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 