ತಾಲೂಕು ಚೆಸ್ನಲ್ಲಿ ನ್ಯಾಸರ್ಗಿಯ ಖುಷಿಗೆ ಪ್ರಥಮ ಸ್ಥಾನ
Nyasargi Khushi Secures First Place in Taluk Chess
ಮುಂಡಗೋಡ 22: ತಾಲೂಕು ಮಟ್ಟದ 14 ವರ್ಷದೊಳಗಿನವರ ಚೆಸ್ ಪಂದ್ಯಾವಳಿಯಲ್ಲಿ ನ್ಯಾಸರ್ಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಖುಷಿ ನಿರಂಜನ ದಡೆದವರ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ತೀವ್ರ ಪೈಪೋಟಿಯ ಪಂದ್ಯಗಳಲ್ಲಿ ಸಮಯಪ್ರಜ್ಞೆ ಹಾಗೂ ಜಾಣ್ಮೆಯ ಆಟದ ಮೂಲಕ ಎದುರಾಳಿಗಳನ್ನು ಮಣಿಸಿದ ಖುಷಿ, ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ಖುಷಿಯ ಸಾಧನೆಗೆ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಮಾರ್ಗದರ್ಶಕ ಶಿಕ್ಷಕ ವಸಂತ ಅಂತೋಜಿ, ಜಿಲ್ಲಾ ಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಶುಭ ಹಾರೈಸಿದ್ದಾರೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 