ಶೋಪಿಯಾನ ಎನ್ಕೌಂಟರ್ನಲ್ಲಿ ಉಗ್ರನ ಹತ್ಯೆಗೈದ ಭದ್ರತಾ ಪಡೆ

ಶ್ರೀನಗರ, ಮಾರ್ಚ್ 9 ,ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್ನಲ್ಲಿ ಸೋಮವಾರ ನಡೆದ ಕಾರ್ಡನ್ ಮತ್ತು ಸರ್ಚ್ ಆಪರೇಷನ್ (ಸಿಎಎಸ್ಒ) ಸಂದರ್ಭದಲ್ಲಿ ಸಂಭವಿಸಿದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳಿಂದ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ರೈಫಲ್ಸ್ (ಆರ್ಆರ್), (ಸಿಆರ್ಪಿಎಫ್) ಕೇಂದ್ರ ಮೀಸಲು ಪೊಲೀಸ್ ಪಡೆ ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ (ಎಸ್ಒಜಿ) ಸೈನಿಕರು ಸೇರಿ ಇಂದು ಬೆಳಿಗ್ಗೆ ಪ್ರಮುಖ ಪಟ್ಟಣ ಶೋಪಿಯಾನ್ನಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ರೆಬನ್ನಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆದರೆ, ಭದ್ರತಾ ಪಡೆಗಳು ಗ್ರಾಮದ ಒಂದು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿರುವಾಗ, ಅಲ್ಲಿ ಅಡಗಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು.  ಎನ್ಕೌಂಟರ್ನಲ್ಲಿ ಗುಂಡಿನ ಚಕಮಕಿ ನಡೆಯಿತು ಎಂದು ಮೂಲಗಳು ತಿಳಿಸಿವೆ. ಈ ನಡುವೆ ಹೆಚ್ಚಿನ ನಷ್ಟ ತಡೆಗಟ್ಟಲು ಪಕ್ಕದ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದೆ.