ಅತಿಸಾರದಿಂದ ಜೀವ ರಕ್ಷಿಸುವ ಸಂಜೀವಿನಿ ಒಆರ್‌ಎಸ್: ಡಾ. ರಾಜೇಂದ್ರ ಗಡಾದ
ORS: A Lifesaver Against Diarrhea – Dr. Rajendra Gadad
ಲೋಕದರ್ಶನ ವರದಿ
ಗದಗ 30: ಅತಿಸಾರದಿಂದ ಉಂಟಾಗುವ ನಿರ್ಜಲೀಕರಣವನ್ನು ತಡೆಗಟ್ಟುವಲ್ಲಿ ಒಆರ್‌ಎಸ್ (ಓರಲ್ ರಿಹೈಡ್ರೇಷನ್ ಸೊಲ್ಯೂಷನ್) ಅತ್ಯಂತ ಪರಿಣಾಮಕಾರಿ ಹಾಗೂ ಸರಳ ಚಿಕಿತ್ಸಾ ವಿಧಾನವಾಗಿದ್ದು, ಲಕ್ಷಾಂತರ ಜೀವಗಳನ್ನು ಉಳಿಸುವ ಸಂಜೀವಿನಿಯಾಗಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ. ರಾಜೇಂದ್ರ ಎಸ್. ಗಡಾದ ಹೇಳಿದರು.
ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ನಗರ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನಗರ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಒಆರ್‌ಎಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಅತಿಸಾರ ಉಂಟಾದಾಗ ಓಷಧಿಗಳಿಗಿಂತ ಮೊದಲು ಒಆರ್‌ಎಸ್ ದ್ರಾವಣವನ್ನು ಸೇವಿಸುವುದು ಅತ್ಯಂತ ಮುಖ್ಯ. ಅತಿಸಾರದ ಆರಂಭಿಕ ಹಂತದಲ್ಲಿಯೇ ಒಆರ್‌ಎಸ್ ಬಳಸಿದರೆ ನಿರ್ಜಲೀಕರಣವನ್ನು ತಡೆದು ಅಮೂಲ್ಯ ಜೀವಗಳನ್ನು ಉಳಿಸಬಹುದು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯಿಂದ ಉಚಿತವಾಗಿ ವಿತರಿಸುವ ಒಆರ್‌ಎಸ್ ಪ್ಯಾಕೆಟ್ಗಳು ಲಭ್ಯವಿಲ್ಲದಿದ್ದರೆ ಮನೆಯಲ್ಲಿಯೇ ಶುದ್ಧ ನೀರು, ಸಕ್ಕರೆ ಹಾಗೂ ಉಪ್ಪಿನ ಸರಿಯಾದ ಪ್ರಮಾಣ ಬಳಸಿ ಒಆರ್‌ಎಸ್ ದ್ರಾವಣವನ್ನು ತಯಾರಿಸಬಹುದೆಂದು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಹೇಶ್ ಕೊಪ್ಪಳ ಮಾತನಾಡಿ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅತಿಸಾರದಿಂದ ಉಂಟಾಗುವ ಸಾವನ್ನು ತಡೆಯುವಲ್ಲಿ ಒಆರ್‌ಎಸ್ ಪ್ರಮುಖ ಪಾತ್ರ ವಹಿಸುತ್ತದೆ. ಸರಿಯಾದ ಸಮಯದಲ್ಲಿ ಒಆರ್‌ಎಸ್ ಹಾಗೂ ಅಗತ್ಯ ಚಿಕಿತ್ಸೆಯನ್ನು ನೀಡುವುದು ಅತ್ಯಗತ್ಯ ಎಂದರು.
ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ಸ್ಫೂರ್ತಿ ಹೊಂಬಾಳೆ, ಡಾ. ಸೌಜನ್ಯ, ಡಾ. ಭೀಮಪ್ಪ ಹಜಾರೆ, ಡಾ. ಭದ್ರಾ ಜಿ.ಜಿ., ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಆರ್.ಆರ್. ಕಲಾಲ್ ಹಾಗೂ ಎಸ್.ವಿ. ಅಂಬಿಗೇರ ಸೇರಿದಂತೆ ಆರೋಗ್ಯ ಸಿಬ್ಬಂದಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಆರಂಭದಲ್ಲಿ ಆರೋಗ್ಯ ನೀರೀಕ್ಷಣಾಧಿಕಾರಿ ಚೇತನ್ ಕರಣಿ ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸಿ. ಹುಲಿಗೆಮ್ಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 