ಓಬವ್ವನ ಧೈರ್ಯ,ಸಾಹಸ ಎಲ್ಲರಿಗೂ ಆದರ್ಶವಾಗಬೇಕು : ಜಿಲ್ಲಾಧಿಕಾರಿ.ಸಾಜಿದ್
Obavva's courage and bravery should be an example for everyone: Deputy Commissioner Sajid
ಕಾರವಾರ 11: ವೀರ ವನಿತೆ ಓಬವ್ವ ಮನೆಯಲ್ಲಿದ ಒನೆಕೆಯನ್ನೇ ಆಯುಧವನ್ನಾಗಿಸಿಕೊಂಡು ಎದುರಾಳಿ ಸೈನಿಕರನ್ನು ಹೊಡೆದುರುಳಿಸಿ ಕೋಟೆಯನ್ನು ರಕ್ಷಿಸಿದ್ದು, ಅವರಲ್ಲಿದ್ದ ಧೈರ್ಯ, ಶೌರ್ಯ ಮತ್ತು ಸಾಹಸ ಪ್ರತಿಯೊಬ್ಬರಿಗೂ ಆದರ್ಶವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹೇಳಿದರು. ಅವರು ಕಾರವಾರದ ಸೈಂಟ್ ಜೋಸೆಫ್ಸ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ವೀರ ವನಿತೆ ಒನಕೆ ಓಬವ್ವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಓಬವ್ವ ಕೋಟೆಯಲ್ಲಿದ್ದ ಜನರನ್ನು ಮತ್ತು ತಾನು ವಾಸವಿದ್ದ ಸ್ಥಳವನ್ನು ರಕ್ಷಿಸುವ ಸಲುವಾಗಿ ತಮ್ಮ ಪ್ರಾಣವನ್ನು ಮುಡುಪಾಗಿಟ್ಟರು. ಇಂತಹ ಮಹಾನೀಯರ ಜೀವನದ ಸಾಧನೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಉದ್ಧೇಶದಿಂದ ಜಯಂತಿಗಳನ್ನು ಆಚರಿಸಲಾಗುತ್ತದೆ. ವಿದ್ಯಾರ್ಥಿಗಳು ಆಧುನಿಕ ಕಾಲದಲ್ಲಿ ಮೊಬೈಲ್‌ಗಳಲ್ಲಿ ಮುಳುಗದೇ, ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವುದರಲ್ಲಿ ಹಾಗೂ ಸಾಮಾನ್ಯ ಜ್ಞಾನದ ಕಡೆ ಹೆಚ್ಚಿನ ಒತ್ತು ನೀಡಬೇಕು. ಓಬವ್ವ ನಂತಹ ಮಹಾನ್ ವ್ಯಕ್ತಿಗಳ ಜೀವನದ ಸಾಧನೆಯನ್ನು ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇತಿಹಾಸ ಸೃಷ್ಠಿಸಿ ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಬಹುದು ಎಂದರು.
ಅಂಕೋಲಾದ ಪಿಕಳೆ ಶಿಕ್ಷಣ ಮಹಾವಿದ್ಯಾಯಲಯದ ಉಪನ್ಯಾಸಕಿ ಡಾ. ಪುಷ್ಪಾ ನಾಯ್ಕ ಶೇಷಗಿರಿ ವೀರ ವನತೆ ಒನಕೆ ಓಬವ್ವನ ಕುರಿತು ಉಪನ್ಯಾಸ ನೀಡಿ, ಓಬವ್ವನ ಹೆಸರು ಕೇಳಿದರೇ ಇಂದಿಗೂ ಸ್ತ್ರೀ, ಪುರಷರಲ್ಲಿ ಸ್ಫೂರ್ತಿಯ ಚಿಲುಮೆ ಉಕ್ಕುತ್ತದೆ. ಸಾಮಾನ್ಯ ಮಹಿಳೆಯಾದ ಓಬವ್ವ ತನ್ನಲ್ಲಿದ ಆತ್ಮ ವಿಶ್ವಾಸ, ಧೈರ್ಯ, ಸಮಯ ಪ್ರಜ್ಞೆಯಿಂದ ಇಂದು ಓಬವ್ವನ ಹೆಸರು ಇತಿಹಾಸದ ಪುಟ್ಟದಲ್ಲಿ ರಾರಾಜಿಸುತ್ತಿದ್ದಾರೆ. ಹೈದರಾಲಿಯ ಸೈನಿಕರು ಕಿಂಡಿಯ ಮೂಲಕ ಕೋಟೆಗೆ ಆಕ್ರಮವಾಗಿ ನುಸುಳುವುದನ್ನು ಕಂಡ ಅವರು ಒನಕೆಯಿಂದಲೇ ಹೈದರಾಲಿಯ ಸೈನ್ಯವನ್ನು ಹೊಡೆದುರುಳಿಸಿದಳು. ಎದುರಾಳಿ ಸೈನ್ಯವು ನುಸುಳಿ ಬಂದ ಆ ಕಿಂಡಿಗೆ ಒನಕೆ ಓಬವ್ವನ ಕಿಂಡಿ ಎಂದು ಹೆಸರಿಡಲಾಗಿದೆ. ಓಬವ್ವನ ಸಾಹಸದ ಕಾರ್ಯಕ್ಕೆ ಮದಕರಿ ನಾಯಕ ಇನ್ನೊಂದು ಸುತ್ತು ಕೊಟೆಯನ್ನು ಕಟ್ಟಿಸಿದ್ದು, ಅದರ ಬಾಗಿಲಿಗೆ ಒನಕೆ ಕಿಂಡಿ ಬಾಗಿಲು ಎಂದು ಹೆಸರಿಡಲಾಗಿದೆ. ಓಬವ್ವ ಬರೀ ವ್ಯಕ್ತಿಯಲ್ಲ ಒಂದು ಶಕ್ತಿ, ಅವರೂ ಎಂದಿಗೂ ಆಜಾರಾಮರ. ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಮುಂತಾದದವರ ಬದುಕು ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸೈಂಟ್ ಜೋಸೆಫ್ಸ್ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪಾಧರ್ ಡಾ. ಸ್ಯಾಂಡಿ ಪಿಂಟೋ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ಸಂಸ್ಕೃತಿ ಇಲಾಖೆ ಮಂಗಲಾ ವೆಂ ನಾಯ್ಕ ಸ್ವಾಗತಿಸಿದರು. ಸೈಂಟ್ ಜೋಸೆಫ್ಸ್ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕಿ ಜಯಶೀಲಾ ನಿರೂಪಿಸಿದರು. ವಿದ್ಯಾರ್ಥಿನಿ ಸಿಂಚನಾ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 