ಜಿ.ಪಂ ಅಧಿಕಾರಿ ದೇವಿದಾಸ್ ಇಂದ ಜಲ್ ಜೀವನ್ ಮಿಷನ್ ಕಾಮಗಾರಿಗಳ ವೀಕ್ಷಣೆ

ಜಿ.ಪಂ ಅಧಿಕಾರಿ ದೇವಿದಾಸ್ ಇಂದ ಜಲ್ ಜೀವನ್ ಮಿಷನ್ ಕಾಮಗಾರಿಗಳ ವೀಕ್ಷಣೆ Observation of Jal Jeevan Mission works by G.P Officer Devidas

ಧಾರವಾಡ 25: ಜಿಲ್ಲೆಯ ಕಲಘಟಗಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ್ ಜೀವನ್ ಮಿಷನ್ ಗ್ರಾಮೀಣ ಯೋಜನೆಯಡಿ ಕೈಗೊಂಡಿರುವ ಹಲವು  ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಪಾಟೀಲ್ ಭುವನೇಶ್ ದೇವಿದಾಸ್  ಶುಕ್ರವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು.  

ಮೊದಲಿಗೆ ಜಿ ಬಸವನಕೊಪ್ಪ  ಗ್ರಾಮ ಪಂಚಾಯಿತಿ ನೀರಾಸಾಗರ ಗ್ರಾಮಕ್ಕೆ ಭೇಟಿ ನೀಡಿದ ಅವರು, ಜಲ್ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಲಾಗಿರುವ ಕಾರ್ಯಾತ್ಮಕ ನಳ(ನಲ್ಲಿ) ಸಂಪರ್ಕ(ಮನೆ ಮನೆಗೆ ಗಂಗೆ)  ಕಾಮಗಾರಿಗಳನ್ನು ಗ್ರಾಮಸ್ಥರು ನಳಕ್ಕೆ ಗಂಗೆ ದೇವಿ ಪೂಜೆ ಮಾಡುವುದನ್ನು ವೀಕ್ಷಿಸಿದ್ದರು.   

ಬಳಿಕ ಸರ್ಕಾರಿ ಶಾಲೆ ಅಂಗನವಾಡಿಗಳಿಗೆ ಭೇಟಿ ನೀಡಿ, ಮಕ್ಕಳು, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ರೊಂದಿಗೆ ಸಮಾಲೋಚನೆ ನಡೆಸಿದ ಅವರು, ಶಾಲೆಯಲ್ಲಿ ಬಿಸಿಯೂಟ, ಮೊಟ್ಟೆ ಹಾಗೂ ಪೌಷ್ಠಿಕ ಆಹಾರ ನೀಡುವ ಬಗ್ಗೆ ಮಾಹಿತಿ ಪಡೆದರು.    

ಇದೇ ವೇಳೆ ಮಾತನಾಡಿದ ಅವರು, ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸಬೇಕು ಹಾಗೂ ಕಾಮಗಾರಿ ಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪೈಪ್ ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ಯಥಾಸ್ಥಿತಿಯಲ್ಲಿ ರಸ್ತೆಗಳನ್ನು ಕಾಂಕ್ರಿಟ್ ಹಾಕಿ ಮುಚ್ಚಬೇಕು. ಪೈಪ್ ಲೈನ್ ಹಾಗೂ ನಲ್ಲಿಗಳು ಹಾಳಾದಲ್ಲಿ ತಕ್ಷಣವೇ ದುರಸ್ತಿ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಭಿಯಂತರರು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.  

ಎಲ್ಲ ಓಊಖಿ ಗಳಿಗೆ ಎರಡು ಬದಿಯಲ್ಲೂ ರೈಲಿಂಗ್ ಅನ್ನು ಅಳವಡಿಸಿಕೊಳ್ಳಲು, ಓಊಖಿ ಸುತ್ತ ಮುತ್ತಲು ಶುಚಿತ್ವ ಹಾಗೂ ತಿಂಗಳಿಗೊಮ್ಮೆ ಓಊಖಿ ಸ್ವಚ್ಚಗೊಳಿಸಲು ಸೂಚಿಸಿದರು.  

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಆವರಣದಲ್ಲಿ  ಹೊಸ ಕೂಸಿನ ಮನೆ ಉದ್ಘಾಟಸಿ ಮಾತನಾಡಿ ಕೂಸಿನ ಮನೆ  ಕಡ್ಡಾಯವಾಗಿ ಮಕ್ಕಳಿಗೆ ಮೂಲ ಸೌಕರ್ಯ ಇರುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದನ್ನು ಸಂಬಂಧಿಸಿದವರು ನಿಗಾವಹಿಸಬೇಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.  

ಸಂಗದೇವರಕೊಪ್ಪ ಗ್ರಾಮ ಪಂಚಾಯಿತಿ ಮಡಕಿಹೊನ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಜಲ್ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಲಾಗಿರುವ ಕಾರ್ಯಾತ್ಮಕ ನಳ(ನಲ್ಲಿ) ಸಂಪರ್ಕ(ಮನೆ ಮನೆಗೆ ಗಂಗೆ) ಕಾಮಗಾರಿಗಳನ್ನು ಪರೀಶೀಲಿಸಿದರು.  

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಗದೀಶ್,  ಕಲಘಟಗಿ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ, ಸಹಾಯಕ ನಿರ್ದೇಶಕರು, ಅಭಿಯಾಂತರು, ಶಿಕ್ಷಕರು, ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಪಿಡಿಒ, ಗ್ರಾಮಸ್ಥರು ಉಪಸ್ಥಿತರಿದ್ದರು.