ಸಂಕೇಶ್ವರ 23: ಪಟ್ಟಣದ ಮಾರುಕಟ್ಟೆಯ ಪ್ರಮುಖ ರಸ್ತೆಗಳಲ್ಲಿ ಕುಳಿತು ರಸ್ತೆ ಸಂಚಾರಕ್ಕೆ ಅಡೆತಡೆ ಮಾಡುತ್ತಿದ್ದ ಬೀದಿ ಬದಿಯ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಸೋಮವಾರ ಮಧ್ಯಾಹ್ನದಿಂದ ನಡೆಯಿತು. ಸೋಮವಾರ ಮಧ್ಯಾಹ್ನ ಪುರಸಭೆ ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ತೆರವು ಕಾರ್ಯಾಚರಣೆ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಹಲವಾರು ತಿಂಗಳುಗಳಿಂದ ಪಟ್ಟಣದ ಮಾರುಕಟ್ಟೆಯ ಪ್ರಮುಖ ರಸ್ತೆಗಳಲ್ಲಿ ಬೀದಿಬದಿ ವ್ಯಾಪಾರಿಗಳು ತಳ್ಳುವ ಗಾಡಿಗಳನ್ನು ಹಾಗೂ ರಸ್ತೆ ಬದಿಯಲ್ಲಿ ಕುಳಿತುಕೊಳ್ಳುವ ಮೂಲಕ ರಸ್ತೆ ಸಂಚಾರಕ್ಕೆ ಅಡತಡೆ ಯನ್ನು ಮಾಡುತ್ತಿದ್ದರು. ಬೀದಿ ಬದಿಯ ವ್ಯಾಪಾರಿಗಳ ಈ ಕ್ರಮಕ್ಕೆ ವಾಹನ ಸವಾರರು ಹಾಗೂ ಪಾದಚಾರಿ ಗಳು ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿತ್ತು. ಇದರಿಂದ ಈ ರಸ್ತೆಗಳಲ್ಲಿ ಸಾಗುವದು ತುಂಬಾ ಕಷ್ಟಕರವಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಪುರಸಭೆ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ಗಳು ನಡೆದಿದ್ದವು. ಬಳಿಕ ಸೋಮವಾರ ಪುರಸಭೆ ಕೆಲವು ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸಿದರು.