ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಕ್ಷೇತ್ರ ಪ್ರಚಾರ ಕಾರ್ಯಕ್ರಮ

ಗದಗ 25:  ಗದಗ ಜಿಲ್ಲೆಯ ನರಗುಂದ ತಾಲೂಕಿನ ಸಂಕದಾಳ ಗ್ರಾಮದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ವಾರ್ತಾ  ಮತ್ತು  ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗ್ರಾಮ ಪಂಚಾಯತ ಇವರ ಸಹಯೋಗದಲ್ಲಿ ಗ್ರಾಮ ಸಂಪರ್ಕ ಯೋಜನೆಯಡಿಯಲ್ಲಿ ಜಾನಪದ ಸಂಗೀತ ಮತ್ತು ಬೀದಿ ನಾಟಕದ ಮೂಲಕ ಸರ್ಕಾರದ ಯೋಜನೆಯ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಜರುಗಿತು. 

ಗ್ರಾಮದ ಗುರುಹಿರಿಯರಾದ ಶರಣಪ್ಪ ಭಾವಿ ಹಾಗೂ ಗುರಿವಿನಗೌಡ ಪೋಲಿಸ್ಪಾಟೀಲ್ ಡೊಳ್ಳು ಬಾರಿಸುವ ಮೂಲಕ ಕ್ಷೇತ್ರ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಲಪ್ರಭಾ ಸಾಂಸ್ಕೃತಿಕ ಕಲಾ ತಂಡ ಕೊಣ್ಣೂರು ಬೀದಿ ನಾಟಕ ಮತ್ತು ಗಾನ ತರಂಗ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದಿಗರ ಸಂಸ್ಥೆ ಅಸುಂಡಿ ಜಾನಪದ ಸಂಗೀತ ತಂಡದವರ ರಾಜ್ಯ ಸರ್ಕಾರ ನೇಕಾರ ಮತ್ತು ಮೀನುಗಾರರ ಸಾಲಮನ್ನಾ, ರೈತ ಸಮ್ಮಾನ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕ  ಹೆಚ್ಚುವರಿ ನಾಲ್ಕು ಸಾವಿರ ರೂ. ನೀಡುತ್ತಿರುವ ಸೌಲಭ್ಯದ ಯೋಜನೆ ಸೇರಿದಂತೆ ಪ್ರತಿ ಗ್ರಾಮದ ಸ್ವಚ್ಛತೆ ಹಾಗೂ ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.