ಅಧಿಕಾರಿಗಳ ಮಧ್ಯಪ್ರವೇಶ: 3 ಬಾಲ್ಯವಿವಾಹಕ್ಕೆ ಬಿತ್ತು ಬ್ರೇಕ್
ಬಳ್ಳಾರಿ, ಮೇ 21: ಕಂಪ್ಲಿ ತಾಲೂಕಿನ ಅರಳಿಹಳ್ಳಿ ತಾಂಡಾದಲ್ಲಿ ನಡೆಯಲಿದ್ದ 3 ಅಪ್ರಾಪ್ತ ವಯಸ್ಸಿನ ಬಾಲಕೀಯರ ಬಾಲ್ಯವಿವಾಹವನ್ನು ಅಧಿಕಾರಿಗಳು ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿದ ಪರಿಣಾಮ ಮದುವೆಗೆ ಬ್ರೇಕ್ ಬಿದ್ದಿದೆ.
ಹೊಸಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶ ಅವರ ನೇತೃತ್ವದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಂಡವು ಪೊಲೀಸ್ ಇಲಾಖೆಯೊಡಗೂಡಿ ನಡೆಸಿದ ಕಾಯರ್ಾಚರಣೆಯಲ್ಲಿ ಮದುವೆಗೆ ಬ್ರೇಕ್ ಬಿದ್ದಿದೆ. ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಅನುಸಾರ ಕಾರ್ಯಪ್ರವೃತ್ತರಾದ ಸಿಡಿಪಿಒ ಅಮರೇಶ ಅವರು ಈ ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಕಾನೂನು ತಿಳಿವಳಿಕೆ ನೋಟಿಸ್ ನೀಡಿ ಅವರಿಂದ ಮುಚ್ಚಳಿಕೆ ಬರೆಸಿಕೊಂಡರು.ಈ ಸಂದರ್ಭದಲ್ಲಿ ಸಿಡಿಪಿಒ ಅಮರೇಶ ಅವರು ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ ಸಂಯೋಜಕ ಚಿದಾನಂದ, ಪೊಲೀಸ್ ಇಲಾಖೆಯ ನಾಗನಗೌಡ ಸೇರಿದಂತೆ ಅನೇಕರು ಇದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 