ಅಧಿಕಾರಿಗಳು ನಿರಂತರ ಜನರ ಸಂಪರ್ಕದಲ್ಲಿರಬೇಕು: ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
Officers should be in constant contact with the people: DC Dr. Vijayamahanthesh Danammavara
ಹಾವೇರಿ 15: ನೌಕರರು ತಮ್ಮ ಕೆಲಸಗಳಲ್ಲಿ ಬದ್ಧತೆ ತೋರಿಸಬೇಕು, ಸಾರ್ವಜನಿಕರ ಪರವಾಗಿ ಕಾಳಜಿಯಿಂದ ಕೆಲಸ ಮಾಡಬೇಕು, ಕಡತಗಳನ್ನು ತ್ವರಿತವಾಗಿ ವಿಲೇವಾರಿಮಾಡಬೇಕು ಹಾಗೂ ಅಧಿಕಾರಿಗಳು ಜನ ಸ್ನೇಹಿಯಾಗಿ ಕೆಲಸಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಮಂಗಳವಾರ ಬ್ಯಾಡಗಿ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಕಂದಾಯ ವಿಷಯಗಳ ಪ್ರಗತಿ ಪರೀಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆ ಉತ್ತಮವಾಗುತ್ತಿದ್ದು, ರೈತರು ತಮ್ಮ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಕೆಲಸದ ನಿಮಿತ್ಯ ಕಚೇರಿಗೆ ಬಂದಾಗ ಆದ್ಯತೆ ಮೇರೆಗೆ ಕೆಲಸಮಾಡಿಕೊಡಿ. ನಿಗದಿತ ಅವಧಿಯೊಳಗೆ ಕೆಲಸ ಆಗದಿದ್ದ ಪಕ್ಷದಲ್ಲಿ ಇಂತಹ ದಿನದಂದು ನಿಮ್ಮ ಕೆಲಸವಾಗುತ್ತದೆ ಎಂದು ತಿಳಿಹೇಳಿ, ಅದು ಬಿಟ್ಟು ಸಂಜೆಯವರೆಗೂ ಕಚೇರಿಯಲ್ಲೇ ಅವರು ಕಾಲ ಕಳೆಯುವಂತಾಗಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಿನೇ ದಿನೇ ಮಳೆ ಹೆಚ್ಚಾಗುತ್ತಿರುವುದರಿಂದ ರೈತರ ಬೆಳೆಗಳಿಗೆ ಹಾನಿ ಉಂಟಾಗಬಹುದು, ಮನೆಗಳು ಬಿದ್ದು ಸಂಕಷ್ಟಕ್ಕೆ ಒಳಗಾಗಬಹುದು. ಈ ಕುರಿತು ಎಚ್ಚರವಾಗಿರಿ, ಘಟನೆ ಕುರಿತು ಮಾಹಿತಿ ಬಂದಲ್ಲಿ ತಕ್ಷಣವೇ ಸ್ಪಂದಿಸಬೇಕು ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಕಂದಾಯ ಗ್ರಾಮ ಹಕ್ಕು ಪತ್ರ, ಅಕ್ರಮ ಸಕ್ರಮ ಅರ್ಜಿಗಳ ವಿಲೇವಾರಿ, ಆಧಾರಸೀಡಿಂಗ್ ಪ್ರಗತಿ ಮೊದಲಾದವುಗಳ ಕುರಿತು ಸಭೆಯಲ್ಲಿ ಚರ್ಚಿಸಿದರು.
ಸಭೆಯಲ್ಲಿ ಬ್ಯಾಡಗಿ ತಹಶೀಲ್ದಾರ ಫಿರೋಜ್‌ಷಾ, ಶಿರಸ್ತೇದರರು, ಉಪ ತಹಸೀಲ್ದಾರ, ಕಂದಾಯ ನೀರೀಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 