ಅಧಿಕಾರಿಗಳ ನಿರ್ಲಕ್ಷ್ಯ : ಸ್ವಂತ ಹಣದಲ್ಲಿ ರಸ್ತೆ ಗುಂಡಿ ಮುಚ್ಚಿದ ಗ್ರಾಮಸ್ಥರು
Officials' negligence: Villagers use their own money to close potholes
ಲೋಕದರ್ಶನ ವರದಿ
ಹೂವಿನಹಡಗಲಿ 18: ಗುಂಡಿ ಬಿದ್ದ ರಸ್ತೆಗಳ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಹಲವು ಸಲ ಮನವಿ ಮಾಡಿದರೂ ಕ್ಯಾರೆ ಎನ್ನಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು, ಕೊನೆಗೆ ಸ್ವಂತ ಹಣದಲ್ಲಿ ರಸ್ತೆ ಗುಂಡಿಗೆ ಮಣ್ಣು ಹಾಕಿ ದುರಸ್ತಿ ಮಾಡಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.ಹೂವಿನಹಡಗಲಿ ತಾಲೂಕಿನ ಮೀರಕೊರನಹಳ್ಳಿ ಯಿಂದ ಶಿವಲಿಂಗನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಯಲ್ಲಿ ಬಿದ್ದಿರುವ ಆಳವಾದ ಗುಂಡಿಗಳನ್ನು ಗ್ರಾಮಸ್ಥರು ಗುಂಡಿಗಳಿಗೆ ಮಣ್ಣು ಹಾಕಿ, ತಾತ್ಕಾಲಿಕವಾಗಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಅಧಿಕಾರಿಗಳು ನಿರ್ಲಕ್ಷ್ಯ ಹಾಗೂ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವುದನ್ನು ಕಂಡು ಬೇಸತ್ತು ಗ್ರಾಮಸ್ಥರು ಸ್ವತಃ ರಸ್ತೆಗಿಳಿದುಜೆಸಿಬಿ, ಟ್ರ್ಯಕ್ಟರ್ ಬಾಡಿಗೆಗಾಗಿ ?20 ಸಾವಿರ ವಂತಿಗೆ ಸಂಗ್ರಹಿಸಿ, ರಸ್ತೆಯ ಗುಂಡಿಗಳನ್ನು ಮುಚ್ಚಿದ್ದಾರೆ.ಗ್ರಾಮದ ಯುವಕರಾದ ಬಿ.ಮಲ್ಲಿಕಾರ್ಜುನ ಗೌಡ, ಸಂಘರ್ಷ, ವಿರೂಪಾಕ್ಷಯ್ಯ, ಪ್ರವೀಣ, ಗುಡಿ ಪ್ರವೀಣ, ಆರ್. ದ್ಯಾಮಜ್ಜ, ನಾಗರಾಜ ಇತರರು ರಸ್ತೆ ದುರಸ್ತಿಯ ನೇತೃತ್ವ ವಹಿಸಿದ್ದರು.ಚಿ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 