ಗ್ರಂಥಾಲಯ ಕಂಬ ಮುರಿದ ಕಾಮಗಾರಿ ದುರಸ್ತಿಗೆ ಅಧಿಕಾರಿಗಳ ನಿರ್ಲಕ್ಷ್ಯ
Officials' negligence in repairing broken library pillar
ಮಾಂಜರಿ, 20 : ಚಿಕ್ಕೋಡಿ ತಾಲ್ಲೂಕಿನ ಶಿರಗಾಂವ ಗ್ರಾಮದ ಸಾರ್ವಜನಿಕ ಗ್ರಂಥಾಲಯ ಕಟ್ಟಡದ ಕಂಬ ಮುರಿದು ಐದು ತಿಂಗಳಾಗಿದೆ. ಆದರೆ, ಈವರೆಗೂ ಅದನ್ನು ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ.
2007ರಿಂದ ಬಾಡಿಗೆ ಕಟ್ಟಡದಲ್ಲಿ ಇದು ಕಾರ್ಯ ನಿರ್ವಹಿಸುತ್ತಿತ್ತು. 2014-15ರಲ್ಲಿ ?15 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಹೊಸ ಕಟ್ಟಡಕ್ಕೆ ಸ್ಥಳಾಂತರವಾಯಿತು.
ಐದು ತಿಂಗಳ ಹಿಂದೆ ಜಲಜೀವನ ಮಿಷನ್ ಯೋಜನೆ ಕಾಮಗಾರಿ ಕೈಗೊಳ್ಳಲು ಆಗಮಿಸಿದ್ದ ಜೆಸಿಬಿ ಯಂತ್ರವೊಂದು ಕಟ್ಟಡದ ಮುಂಭಾಗಕ್ಕೆ ಬಡಿದ ಕಾರಣ, ಕಂಬದ ಸರಳುಗಳು ಕಿತ್ತು ಹೊರಬಂದಿವೆ. ಇಂದೋ, ನಾಳೆಯೋ ಬೀಳುವ ಸ್ಥಿತಿಯಲ್ಲಿ ಇದ್ದರೂ, ಇದಕ್ಕೂ ತಮಗೂ ಸಂಬಂಧವೇ ಇಲ್ಲ' ಎಂಬಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ವರ್ತಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
6 ಸಾವಿರಕ್ಕೂ ಅಧಿಕ ಪುಸ್ತಕ ಗ್ರಂಥಾಲಯಲ್ಲಿ ಎರಡು ಕಂಪ್ಯೂಟರ್‌ಗಳಿದ್ದು, 6 ಸಾವಿರಕ್ಕೂ ಅಧಿಕ ಪುಸ್ತಕಗಳಿವೆ. ಪ್ರಮುಖ ದಿನಪತ್ರಿಕೆಗಳು, ನಿಯತಕಾಲಿಕೆಗಳು ಬರುತ್ತವೆ. ಇವುಗಳನ್ನು ಓದಲು ಪ್ರತಿದಿನ ನೂರಾರು ಓದುಗರು ಬರುತ್ತಾರೆ.
ಗ್ರಂಥಾಲಯಕ್ಕೆ ಹೊಂದಿಕೊಂಡು ಶುದ್ಧ ಕುಡಿಯುವ ನೀರಿನ ಘಟಕವಿದೆ. ಆದರೆ, ಅದು ಸುಸ್ಥಿತಿಯಲ್ಲಿ ಇಲ್ಲ. ಕಿಡಿಗೇಡಿಗಳು ಅದನ್ನು ಮಲಿನಗೊಳಿಸುತ್ತಿದ್ದಾರೆ.
ನೀರಿನ ಘಟಕ ಹಾಗೂ ಗ್ರಂಥಾಲಯದ ಮಧ್ಯೆ ಇರುವ ಜಾಗದಲ್ಲಿ ಕೆಲವರು ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡುಬರುತ್ತಿದೆ. ಹಾಗಾಗಿ ಗ್ರಂಥಾಲಯಕ್ಕೆ ಆಗಮಿಸುವ ಓದುಗರು ಮೂಗಿಗೆ ಕರವಸ್ತ್ರ ಕಟ್ಟಿಕೊಂಡೇ ಓದುವಂತಾಗಿದೆ.
ಗ್ರಂಥಾಲಯದ ಸುತ್ತಲಿನ ವಾತಾವರಣ ಶೀಘ್ರ ಶುಚಿಗೊಳಿಸಬೇಕು. ಮುರಿದು ಬಿದ್ದು ಸಿಮೆಂಟ್ ಕಂಬ ತೆರವುಗೊಳಿಸಿ ಮುಂದೆ ಆಗಬಹುದಾದ ಅನಾಹುತ ತಪ್ಪಿಸಬೇಕು' ಎಂಬದು ಓದುಗರ ಆಗ್ರಹ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 