ಒಣದ ಗಿಡಗಳು ತೆರವುಗೊಳಿಸದಿದ್ದರೆ ಅಧಿಕಾರಿಗಳೇ ಹೊಣೆ
Officials are responsible if dead plants are not cleared.
ಲಕ್ಷ್ಮೇಶ್ವರ 04 : " ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರುಗಡೆ ಬರುವ ಪಶು ಆಸ್ಪತ್ರೆ ಕಂಪೌಂಡ ಒಳಗಡೆ ಇರುವ ಎರಡು ಸಂಪೂರ್ಣ ಒಣಗಿರುವ 2 ಗಿಡಗಳಿಗಳು ಬೀಳುವ ಹಂಚಿನಲ್ಲಿದ್ದು ಅವುಗಳು ಗಾಳಿ ಮಳೆಗೆ ಬಿದ್ದು ಯಾವುದೇ ಅನಾಹುತ ಸಂಭವಿಸುವ ಮುನ್ನ ತೆರವುಗೊಳಿಸುವಂತೆ ಸ್ಥಳೀಯ ನಿವಾಸಿಗಳಾದ ಸೋಮಣ್ಣ ನಂದೆಣ್ಣವರ ಎಸ್ ಜಿ ಎಲಿಗಾರ ಮಜಿದ್ ಕಿಲ್ಲೇದಾರ ಅವರು ಸಂಬಂಧಿಸಿದ ಪಶು ವೈದ್ಯಾಧಿಕಾರಿಗಳಿಗೆ ಮತ್ತು ಶಿರಹಟ್ಟಿ ವಲಯ ಅರಣ್ಯ ಅಧಿಕಾರಿಗಳಿಗೆ ತಿಳಿಸಿ ಮಾಹಿತಿ ನೀಡಿದರು ಸಹ ಇಲ್ಲಿವರೆಗೂ ಒಣಗಿದ ಗಿಡಗಳನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ ಅಧಿಕಾರಿಗಳ ನಿರ್ಲಕ್ಷತನ ಹೀಗೆ ಮುಂದುವರೆದರೆ ಒಣಗಿದ ಗಿಡಗಳು ಬಿದ್ದು ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ನೇರ ಹೊಣೆಗಾರರು ಅಧಿಕಾರಿಗಳೇ ಆಗುತ್ತಾರೆ ಎಂದು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆಹಾಗೂ ಇದೇ ವಿಷಯವಾಗಿ ಈಗಾಗಲೇ ಕೆಲ ಪತ್ರಿಕೆಗಳಲ್ಲಿ ವರದಿ ಸಹ ಪ್ರಕಟವಾಗಿದೆ ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಇನ್ನಾದರೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಅನಾಹುತ ಸಂಭವಿಸುವ ಮುನ್ನ ಒಣಗಿದ ಗಿಡಗಳನ್ನು ತೆರವುಗೊಳಿಸಲು ಮುಂದಾಗಬೇಕು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 