ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ  Officials instructed to provide immediate solutions to public grievances

ಮುದ್ದೇಬಿಹಾಳ  08: ತಾಲೂಕಿನ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ  ಅಧಿಕಾರಿಗಳು ತಕ್ಷಣದಲ್ಲಿಯೇ ಸ್ವಂದಿಸುವ ಮೂಲಕ ಜನರಿಗೆ ನ್ಯಾಯ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಬರಿ ನೇಪ ಹೇಳಿಕೊಂಡು ಕಾಲಹರಣ ಮಾಡುವ ಜನರಿಗೆ ಬೇಡವಾದ ಅಧಿಕಾರಿಗಳು ಜಾಗಾ ಖಾಲಿ ಮಾಡಿ ನಿಮ್ಮ ಜಾಗೇಯಲ್ಲಿ ಮತ್ತೋಬ್ಬ ಯೋಗ್ಯ ಅಧಿಕಾರಿಗಳನ್ನು ಕರೆತಂದು ಅಭಿವೃದ್ಧಿ ಕಾರ್ಯಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಸಿ.ಎಸ್‌. ನಾಡಗೌಡ ಅಪ್ಪಾಜಿ ಹೇಳಿದರು.ಪಟ್ಟಣದ ಎ ಪಿ ಎಂ ಸಿ ಬಡಾವಣೆಯಲ್ಲಿರುವ ಕರ್ನಾಟಕ ಬ್ಯಾಂಕ್ ಸಭಾಭವನದಲ್ಲಿ ಮಂಗಳವಾರ ನಡೆದ ಮತಕ್ಷೇತ್ರದ ಸರಕಾರಿ ಅಧಿಕಾರಿಗಳ ಪ್ರಗತಿ ಪರೀಶೀಲನಾ ಸಭೆಯಲ್ಲಿ ಮಾತನಾಡಿದರು.

ತಾಲೂಕಿನ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದರು.ಖಾಸಗಿ ಶಾಲೆಗಳಿಂದ ಸರಕಾರಿ ಶಾಲೆ ಶಿಕ್ಷಕರು ಪ್ರತಿಭಾನ್ವೀತರಾಗಿರುತ್ತಾರೆ ಜತೆಗೆ ಅರ್ಹತಾ ಪರೀಕ್ಷೇ ಬರೆದು ಉತ್ತಿರ್ಣರಾಗಿ ಸರಕಾರಿ ಶಿಕ್ಷಕರಾಗಿರುತ್ತಾರೆ ಈ ಕುರಿತು ಸರಕಾರಿ ಶಾಲೆಗಳಲ್ಲಿ ಹೆಚ್ಚು ಪೋಷಕರು ತಮ್ಮ ಮಕ್ಕಳನ್ನು ಓದಿಸಲು ಮುಂದಾಗುವಂತೆ ಅರಿವು ಮೂಡಿಸಬೇಕು. ಸಧ್ಯ ನಮ್ಮ ಸರಕಾರ ಮುಖ್ಯಮಂತ್ರಿ ಬದಲಾವಣೆಯಾಗಿರುವುದರಿಂದ ಆರ್ಥಿಕ ಅನುಮೋದನೆಗೆ ಸ್ವಲ್ಪ ವಿಳಂಬವಾಗವಹುದು  

ಆದರೇ ಸರಕಾರಿ ಶಾಲೆಗಳಲ್ಲಿನ ಮಕ್ಕಳ ಗುಣಮಟ್ಟದ  ಶಿಕ್ಷಣ ಒದಗಿಸಲು ಯಾವೂದೇ ತೊಂದರೆಯಾಗದಂತೆ ಶಾಲಾ ಕಟ್ಟಡಗಳ ಧುರಸ್ಥಿಗಾಗಿ ಹಾಗೂ ಇತರೇ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮುಖ್ಯಮಂತ್ರಿಗಳೊಂದಿಗೆ ವಿಶೇಷ ಅನುದಾನ ತರುವ ಮೂಲಕ ಅಭಿವೃದ್ಧಿ ಪಡಿಸಲಾಗುವುದು  ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿ ಬಿ ಎಸ್ ಸಾವಳಗಿ ಅವರಿಗೆ ಸೂಚಿಸಿದರು.ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರಲ್ಲಿ ಅರಿವು ಮೂಡಿಸಿ, ಹಣ್ಣು ಹಾಗೂ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು ಎಂದು ಸೂಚಿಸಿದರು.ತಾಲೂಕಿನಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕು. ವಿಶೇಷವಾಗಿ ದಾಬಾಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಯಲು ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸಬೇಕು ಎಂದು ತಿಳಿಸಿದರು.