ನೀರು ಪೂರೈಕೆ ವೇಗಗೊಳಿಸಲು ಅಧಿಕಾರಿಗಳಿಗೆ ಸೂಚನೆ

ನೀರು ಪೂರೈಕೆ ವೇಗಗೊಳಿಸಲು ಅಧಿಕಾರಿಗಳಿಗೆ ಸೂಚನೆ Officials instructed to speed up water supply

ಹಾನಗಲ್   12: ಅಮೃತ 2.0 ಯೋಜನೆಯಡಿ ನಗರಕ್ಕೆ 24*7 ಕುಡಿಯುವ ನೀರು ಪೂರೈಸುವ ಕಾಮಗಾರಿ ತ್ವರಿತಗೊಳಿಸಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಶಾಸಕ ಶ್ರೀನಿವಾಸ ಮಾನೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ನಗರ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಮಂಡಳಿ ಮತ್ತು ಪುರಸಭೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಮಳಗಿ ಧರ್ಮಾ ಜಲಾಶಯದಿಂದ ಪೈಪ್‌ಲೈನ್ ಮೂಲಕ ನೀರು ತರುವ ಮಹತ್ವಾಕಾಂಕ್ಷೆಯ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಮಾನೆ, ಕುಂಟುನೆಪ ಹೇಳದೇ ಕಾಮಗಾರಿ ಚುರುಕುಗೊಳಿಸುವಂತೆ ಸೂಚಿಸಿದರು. 

ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ನಗರದಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳ ಪ್ರಗತಿಯ ವಿವರ ಪಡೆದ ಶ್ರೀನಿವಾಸ ಮಾನೆ, ಕಾಮಗಾರಿ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಸಲ್ಲದು. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಕೆಲವೆಡೆ ಸಿಡಿ ನಿರ್ಮಾಣಕ್ಕೆ ಸಾರ್ವಜನಿಕರಿಂದ ಬೇಡಿಕೆ ಬಂದಿದ್ದು, ಪರೀಶೀಲಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.  ತಂತ್ರಾಂಶದ ದೋಷದಿಂದ ಕೆಲವರು ಇಸ್ವತ್ತು ಪಡೆಯಲು ವಿಳಂಬವಾಗುತ್ತಿದೆ. ದೋಷ ನಿವಾರಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಜರುಗಿಸುವಂತೆ ಸೂಚಿಸಿದರು. ಕರ್ನಾಟಕ ನಗರ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಮಂಡಳಿಎಇಇ ಆರ್‌.ಕೆ.ಉಮೇಶ, ಅಭಿಯಂತರ ಅತೀಕ್, ಪುರಸಭೆ ಮುಖ್ಯಾಧಿಕಾರಿ ವೈ.ಕೆ.ಜಗದೀಶ, ಅಭಿಯಂತರ ನಾಗರಾಜ ಮಿರ್ಜಿ ಇದ್ದರು.