ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ತಡೆಗಟ್ಟಲು ಅಧಿಕಾರಿಗಳ ಕ್ರಮ ಅಗತ್ಯ
ಹಾವೇರಿ 13: ರಾಜ್ಯದಲ್ಲಿ 2025-26 ನೇ ಸಾಲಿನ ಖಾಸಗಿ ಶಾಲೆಗಳ ಪ್ರವೇಶವನ್ನು ಪ್ರಾರಂಭಿಸಿ ದಾಖಲಾತಿ ಪ್ರಾರಂಭ ಮಾಡಿವೆ. ಬಹುತೇಕ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಮನಬಂದಂತೆ ವಸೂಲಿ ಮಾಡಲು ಮುಂದಾಗಿವೆ. ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ಆಯುಕ್ತರು, ಅಪರಆಯುಕ್ತರು, ವಿವಿಧ ಜಿಲ್ಲೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸರ್ಕಾರ ತಮಗೆ ಯಾವುದೇ ಸಂಬಂಧವಿಲ್ಲದಂತೆ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವಂತಹ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು 2009ರ ಆರಿ್ಟ.ಇಕಾಯ್ದೆಯನ್ನು ಸಂಪೂರ್ಣವಾಗಿಉಲ್ಲಂಘನೆ ಮಾಡುವುದರ ಮೂಲಕ ಹಗಲು ದರೋಡೆ ಮಾಡಲು ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಾಗುತ್ತಿವೆ.ಡೊನೆಷನ್ ನಿಯಂತ್ರಣಕ್ಕೆ ’ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ’ ( ಡೊನೇಷನ್ ವಿರೋಧಿ ಸಮಿತಿ) ವನ್ನುತಕ್ಷಣರಚಿಸಬೇಕು. ವಂತಿಗೆ ವಸೂಲಿಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ. ಕ್ರಮಕೈಗೊಳ್ಳಬೇಕು.ಜಿಲ್ಲಾ ಮತ್ತುತಾಲೂಕ ಮಟ್ಟದಲ್ಲಿಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಮತ್ತು ಶಿಕ್ಷಣ ಇಲಾಖೆಯ ಮುಖ್ಯಸ್ಥರು, ಪಾಲಕರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆಯನ್ನುಕರೆಯಬೇಕು.ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲುರಾಜ್ಯ ಸರ್ಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿಗೆ ತರಬೇಕು. ಸರ್ಕಾರ ನಿಗದಿಗೊಳಿಸಿರುವ ಪ್ರವೇಶ ಶುಲ್ಕದ ವಿವರವನ್ನು ಮಾಧ್ಯಮಗಳ ಮೂಲಕ ಮತ್ತುಚಿತ್ತಿ ಪತ್ರ. ಕರಪತ್ರಗಳ ಮೂಲಕ ಪ್ರಚಾರ ಪಡಿಸಬೇಕು.ಶಿಕ್ಷಣ ಸಂಸ್ಥೆಗಳು ಪ್ರತಿ ತಿಂಗಳಿಗೊಮ್ಮೆ ಪಾಲಕರ ಸಭೆಕರೆದು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತುಚರ್ಚಿಸುವಂತೆ ನಿರ್ದೇಶಿಸಬೇಕು.ಜಿಲ್ಲಾಧಿಕಾರಿಗಳು ಪ್ರಾಧಿಕಾರರಚನೆಕುರಿತು ಪಾಲಕರು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು. ಶಿಕ್ಷಣ ಇಲಾಖೆಯ ಮುಖ್ಯಸ್ಥರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿಸಭೆಕರೆಯಬೇಕುಎಂದು ಬಸವರಾಜಎಸ್ ಒತ್ತಾಯಿಸಿದರು.