ಚುನಾವಣಾ ಮತದಾರರ ನೋಂದಣಿ ಪ್ರಕ್ರಿಯೆಗೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು
Officials should be vigilant in the electoral voter registration process
ಚುನಾವಣಾ ಮತದಾರರ ನೋಂದಣಿ ಪ್ರಕ್ರಿಯೆಗೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು
ಬಳ್ಳಾರಿ 27: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಮತದಾರರ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನೀರೀಕ್ಷಿತ ಮಟ್ಟದಲ್ಲಿ ನೋಂದಣಿಗೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026 ಅಂಗವಾಗಿ ವಿಶೇಷ ಮಿಂಚಿನ ನೋಂದಣಿ ಅಭಿಯಾನ ಪ್ರಗತಿ ಕುರಿತು ಸೋಮವಾರ ಏರಿ್ಡಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೋಂದಣಿ ಕಾರ್ಯದಲ್ಲಿ ಎಲ್ಲಾ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಪ್ರೌಢಶಾಲೆ, ವಿಶ್ವವಿದ್ಯಾಲಯ, ಕೃಷಿ, ವೈದ್ಯಕೀಯ ಕಾಲೇಜು, ತಾಂತ್ರಿಕ ಕಾಲೇಜು, ಪದವಿಪೂರ್ವ, ಪದವಿ ಕಾಲೇಜುಗಳಲ್ಲಿ ವ್ಯಾಪಕ ಪ್ರಚಾರ ಮಾಡಿ ನೋಂದಣಿ ಸಂಖ್ಯೆಯನ್ನು ಹೆಚ್ಚಿಸಬೇಕು. ಅಗತ್ಯವಿದ್ದಲ್ಲಿ ಭರ್ತಿ ಮಾಡುವ ವಿಧಾನ ಕುರಿತು ತರಬೇತಿ ನೀಡಬೇಕು ಎಂದು ನಿರ್ದೇಶನ ನೀಡಿದರು. ಭಾರತ ಚುನಾವಣಾ ಆಯೋಗ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ನಿರ್ದೇಶನದಂತೆ ಬರುವ ನವೆಂಬರ್ 06 ರೊಳಗೆ ಮತದಾರರ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಅಧಿಕಾರಿಗಳು ಯಾವುದೇ ರೀತಿಯಲ್ಲಿ ನಿರ್ಲ್ಯಕ್ಷಿಸುವಂತಿಲ್ಲ. ಸಂಬಂಧಿಸಿದ ಅಧಿಕಾರಿಗಳು ಶಾಲೆ-ಕಾಲೇಜು ಸಮಷ್ಟೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರೀಶೀಲಿಸಬೇಕು ಎಂದು ತಿಳಿಸಿದರು.ಎಲ್ಲಾ ಅರ್ಹ ಮತದಾರರ ನೋಂದಣಿಯನ್ನು ಮಾಡಿಸಲು ಅಕ್ಟೋಬರ್ 27, 30 ಹಾಗೂ ನವೆಂಬರ್ 03ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ ಆಯೋಜಿಸಲಾಗಿದೆ. ಅಭಿಯಾನದ ದಿನಗಳಂದು ತಮ್ಮ ಕ್ಷೇತ್ರವ್ಯಾಪ್ತಿಗೆ ಒಳಪಡುವ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳ ಸೇವೆಯನ್ನು ಪಡೆದು ಅರ್ಹ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಅಲ್ಲಿ ನೋಂದಣಿಗಾಗಿ ಅರ್ಹರಿರುವ ಮತದಾರರನ್ನು ಕಚೇರಿ ಮುಖ್ಯಸ್ಥರ ಮುಖಾಂತರ ಸಂಪರ್ಕಿಸಿ, ನಿಗದಿಪಡಿಸಿದ ಸಮಯದೊಳಗೆ ನಿಯಮಾನುಸಾರ ನಮೂನೆ-19ರ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸ್ವೀಕರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿಶ್ವವಿದ್ಯಾನಿಲಯದ ಕುಲಸಚಿವರು ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಿ ಆದೇಶಿಸಲಾಗಿದ್ದು, ಈ ಎಲ್ಲಾ ಅಧಿಕಾರಿಗಳು ಕೂಡಲೇ ಅರ್ಹ ಮತದಾರರನ್ನು ಗುರುತಿಸಿ ನೋಂದಣಿಗಾಗಿ ಅರ್ಜಿಗಳನ್ನು ಸ್ವೀಕರಿಸಲು, ಈ ಕುರಿತು ವ್ಯಾಪಕ ಪ್ರಚಾರ ನೀಡಲು ಮತ್ತು ಅರ್ಜಿ ಸ್ವೀಕೃತಿ ಸಂಖ್ಯೆಯನ್ನು ಹೆಚ್ಚಿಸುವಂತೆ ಎಂದು ತಿಳಿಸಿದರು.ಜಿಪಂ ಉಪಕಾರ್ಯದರ್ಶಿ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು, ವಿದ್ಯಾಸಂಸ್ಥೆ, ವಿಶ್ವವಿದ್ಯಾಲಯಗಳಿಗೆ ಈಗಾಗಲೇ ನಮೂನೆ-19 ಅರ್ಜಿಗಳನ್ನು ವಿತರಣೆ ಮಾಡಲಾಗಿದೆ. ತ್ವರಿತವಾಗಿ ಅರ್ಹತೆ ಇರುವ ಎಲ್ಲಾ ಶಿಕ್ಷಕರನ್ನು ನೋಂದಾಯಿಸಿಕೊಳ್ಳಲು ಸೂಚಿಸಬೇಕು ಎಂದರು.
ಈಶಾನ್ಯ (ಕಲಬುರಗಿ) ವ್ಯಾಪ್ತಿಯ ಎಲ್ಲಾ ಜಿಲ್ಲೆಗಳ ಅರ್ಹ ಶಿಕ್ಷಕರಿಗೆ ಅರ್ಜಿ ನಮೂನೆ-19 ನೀಡಬಹುದಾಗಿದೆ ಮತ್ತು ಅವರಿಂದ ಭರ್ತಿ ಮಾಡಿಸಿಕೊಂಡು ಅರ್ಜಿ ಸ್ವೀಕರಿಸಬಹುದಾಗಿದೆ. ಉಳಿದ ಜಿಲ್ಲೆ ಹಾಗೂ ಹೊರ ರಾಜ್ಯದವರು ಅನರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದರು.ಸಂಬಂಧಿಸಿದ ಅಧಿಕಾರಿಗಳು ಪ್ರತಿ ದಿನ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿ ಅದರ ವರದಿಯನ್ನು ಕಡ್ಡಾಯ ಸಲ್ಲಿಸಬೇಕು ಎಂದ ಅವರು, ಹಾಗೆಯೇ ನೋಂದಣಿಗೆ ಭರ್ತಿಯಾಗದೇ ಉಳಿದ ಅರ್ಜಿ ನಮೂನೆಗಳನ್ನು ಹಿಂದಿರುಗಿಸಬೇಕು ಎಂದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗೋಪಾಲಸ್ವಾಮಿ, ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ಬಸವರಾಜ್ ಹಿರೇಮಠ ಸೇರಿದಂತೆ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್ ಪಿ-ಸಿಆರ್ ಪಿ ಅಧಿಕಾರಿಗಳು, ವಿವಿಧ ಶಾಲಾ-ಕಾಲೇಜು, ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 