ಅಧಿಕಾರಿಗಳು ಸಭೆಗೆ ಬರುವಾಗ ನಿಖರ ಮಾಹಿತಿ ತರಬೇಕು: ಜಮೀರ್‌ಖಾನ್
Officials should bring accurate information when coming to meetings: Zamir Khan
ವಿಜಯನಗರ(ಹೊಸಪೇಟೆ) 28: ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನ ಮಟ್ಟ ಸಾಕಷ್ಟು ಸುಧಾರಣೆಯಾಗಿದೆ. ಆದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಬಸ್‌ಗಳ ಕೊರತೆಯಿಂದ ಇತರೆ ವಾಹನಗಳನ್ನು ಅವಲಂಬಿಸಬೇಕಾಗಿದ್ದು, ಸಾರಿಗೆ ಸಚಿವರೊಂದಿಗೆ ಚರ್ಚಿಸಿ ಹೆಚ್ಚುವರಿ ಬಸ್‌ಗಳ ಸಂಚಾರಕ್ಕೆಕ್ರಮ ಕೈಗೊಳ್ಳಲಾಗುತ್ತದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾಉಸ್ತುವಾರಿ ಸಚಿವರು ಬಿ.ಜೆಡ್.ಜಮೀರ್‌ಅಹ್ಮದ್‌ಖಾನ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶನಿವಾರಅವರು ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳಿಂದ ಅನೇಕ ಯಶೋ ಗಾಥೆಗಳನ್ನು ಕಾಣಬಹುದಾಗಿದೆ.ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯಿಂದ ಪರೀಶೀಲನೆ ನಡೆಸಿ ಕುಂದು ಕೊರತೆಗಳನ್ನು ನಿವಾರಿಸುವ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ಸಂಸದರಾದ ಈ. ತುಕಾರಾಮ್‌ರವರು ಪ್ರಸ್ತಾಪಿಸಿ ವಿವಿಧ ಮಾರ್ಗಗಳಲ್ಲಿ ಶಾಲೆಗೆ ಬರುವ ವಿದ್ಯಾರ್ಥಿಗಳ ಅಂಕಿ ಅಂಶಗಳನ್ನು ತಯಾರಿಸಿ ಹೆಚ್ಚಿನ ಬೇಡಿಕೆಇರುವ ಸಮಯ ಮತ್ತು ಮಾರ್ಗಗಳಲ್ಲಿ ಬಸ್ ಸಂಚರಿಸಲು ಡಿಡಿಪಿಐ ಮತ್ತು ಕೆಕೆಆರ್‌ಟಿಸಿ ಡಿಸಿ ಕ್ರಮ ವಹಿಸಬೇಕೆಂದಾಗ, ಮುಂದಿನ ಸಭೆಗೆ ಡಿಡಿಪಿಐಗೆ ಎಲ್ಲಾ ವಿವರ ಸಲ್ಲಿಸಲು ಸಚಿವರು ಸೂಚನೆ ನೀಡಿದರು.
ಪೋಕ್ಸೋ ತಡೆಗೆ ಜಾಗೃತಿ: ಹಾಸ್ಟೆಲ್ ಸೇರಿದಂತೆ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಲ್ಲಿ ಪೋಕ್ಸೋ ತಡೆಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಇತರೆ ಜಿಲ್ಲೆಯಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿ ಬಾಲಗರ್ಭಿಣಿಯಾದ ಬಗ್ಗೆ ವರದಿಯಾಗಿದ್ದು, ಜಿಲ್ಲೆಯಎಲ್ಲಾ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆತಂದು ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಕಳುಹಿಸುವಾಗ ಕಡ್ಡಾಯವಾಗಿ ಪೋಷಕರ ಅನುಮತಿ ಪಡೆದುಕೊಳ್ಳಬೇಕೆಂಬ ನಿಯಮ ಜಾರಿಗೆ ತರಲು ಸೂಚನೆ ನೀಡಿದರು.
ನೀಟ್ ಪ್ರವೇಶಕ್ಕೆಯುಡಿಐಡಿ ಸುಳ್ಳು ದಾಖಲೆ ಸೃಷ್ಟಿ : ಬೆಂಗಳೂರಿನವರು ಹಗರಿಬೊಮ್ಮನಹಳ್ಳಿ ವಿಳಾಸದಲ್ಲಿ ಆಧಾರ್ ಬದಲಿಸಿ ಮೆಡಿಕಲ್ ಸೀಟ್ ಪಡೆಯಲು ಆರೋಗ್ಯ ಇಲಾಖೆ ಕ್ಲಾರ್ಕ್ ಮತ್ತು ವೈದ್ಯರು ಸೇರಿ ಸುಳ್ಳು ದಾಖಲೆ ಸೃಷ್ಟಿಸಿ ಅಂಗವಿಕಲರ ಪ್ರಮಾಣ ಪತ್ರ ವಿತರಣೆ ಮಾಡಿದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಹಿಂದೆ ದೊಡ್ಡ ಜಾಲವಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸಚಿವರು ಸೂಚಿಸಿದರು. ಇದಕ್ಕೆ ಪೂರಕ ಮಾಹಿತಿ ನೀಡಿದ ಡಿಎಚ್‌ಒ ಈಗಾಗಲೇ ವೈದ್ಯರು ಮತ್ತು ಸಿಬ್ಬಂದಿಗೆ ನೊಟೀಸ್ ನೀಡಲಾಗಿದೆ. ಸರ್ಕಾರಕ್ಕೆ206 ಪುಟಗಳ ವರದಿ ಸಲ್ಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಕಾನೂನು ಸುವ್ಯವಸ್ಥೆಗೆ ಸೂಚನೆ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಕಾಪಾಡಬೇಕು. ಜತೆಗೆಜೂಜೂ ಅಡ್ಡೆಗಳನ್ನು ಬೇರು ಸಮೇತ ಕಿತ್ತೆಯೆಸಯಬೇಕು. ಜೂಜೂ ಮತ್ತು ಮೋಜಿನ ಕೂಟಗಳಿಗೆ ಅಹ್ವಾನಿಸಿ ಜನರಿಂದ ಸಾಕಷ್ಟು ಹಣವನ್ನು ಕಿತ್ತುಕೊಳ್ಳುತ್ತಿರುವ ಮಾಹಿತಿಇದೆ. ಅಂತಹ ಯಾವುದೇ ವ್ಯಕ್ತಿಗಳನ್ನು ಬಿಡಬಾರದು.ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಶಾಸಕರು ಪ್ರಸ್ತಾಪಿಸಿದರು.
ಈ ವೇಳೆ ಸಭೆಯಲ್ಲಿ ಸಂಸದರಾದ ಈ.ತುಕಾರಾಮ್, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜನಾಯ್ಕ, ಹಡಗಲಿ ಶಾಸಕ ಕೃಷ್ಣನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೆಂದ್ರ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಕವಿಗ್ಫಿ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಅನುಪಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 