ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಯಶಸ್ಸಿಗೆ ಅಧಿಕಾರಿಗಳು ಸಮರಾ್ಣ ಭಾವದಿಂದ ಕೆಲಸ ಮಾಡಿ: ಡಾ. ಶರಣಬಸಪ್ಪ ಗಣಜಲಖೇಡ
Officials should work with a fighting spirit for the success of national health programs: Dr. Sharan
ವಿಜಯನಗರ (ಹೊಸಪೇಟೆ) 22: ಸರ್ಕಾರದಿಂದ ಜಾರಿಯಾಗುತ್ತಿರುವ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಸಮರ್ಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮರಾ್ಣ ಭಾವದಿಂದ ಕೆಲಸ ಮಾಡಬೇಕು ಎಂದು ಕಲ್ಬುರ್ಗಿ ವಿಭಾಗೀಯ ಸಹ ನಿರ್ದೇಶಕರ ಕಚೇರಿಯ ಉಪನಿರ್ದೇಶಕರಾದ *ಡಾ. ಶರಣಬಸಪ್ಪ ಗಣಜಲಖೇಡ* ಅವರು ಸೂಚಿಸಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಯಿ-ಮಗು ಆರೋಗ್ಯಕ್ಕೆ ಮೊದಲ ಆದ್ಯತೆ: ಚಿಕಿತ್ಸೆ ಅರಸಿ ಬರುವ ಗರ್ಭಿಣಿಯರು ಮತ್ತು ಬಾಣಂತಿಯರ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಸಂಪೂರ್ಣವಾಗಿ ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮಿಸಬೇಕು. ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡಲಾಗುವ ಲಸಿಕೆಗಳನ್ನು ಕಾಲಕಾಲಕ್ಕೆ ಯಾವುದೇ ಲೋಪವಾಗದಂತೆ ನಿಗದಿತ ಗುರಿ ಸಾಧಿಸಬೇಕು.
ಇನ್ನೇನು ಮಳೆಗಾಲ ಹತ್ತಿರ ಬರುತ್ತಿರುವುದರಿಂದ ಮಲೇರಿಯಾ, ಡೆಂಗು, ಚಿಕನ್ ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸದಾ ಸನ್ನದ್ಧವಾಗಿರಬೇಕು. ತುರ್ತು ಚಿಕಿತ್ಸೆಗೆ ಓಷಧಗಳ ಕೊರತೆಯಾಗದಂತೆ ಅಧಿಕಾರಿಗಳು ನಿರಂತರ ನಿಗಾವಹಿಸಬೇಕು. ಸೊಳ್ಳೆಗಳ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಗಾರ ಆಯೋಜಿಸಬೇಕು ಎಂದ ಅವರು, ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಾಯಿ ಕಡಿತ, ಮತ್ತು ಹಾವು ಕಡಿತಕ್ಕೆ ಅಗತ್ಯವಿರುವ ತುರ್ತು ಚಿಕಿತ್ಸಾ ಲಸಿಕೆಗಳು ಹಾಗೂ ಓಷಧಗಳು ಸದಾ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದರು.
ಕ್ಷಯ ಹಾಗೂ ಕುಷ್ಠರೋಗ ಮುಕ್ತ ಜಿಲ್ಲೆಯಾಗಿಸಿ:
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರಂಭಿಕ ಹಂತದಲ್ಲೇ ಕ್ಷಯ ರೋಗಿಗಳನ್ನು ಸಕಾಲದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು. ಇದರೊಂದಿಗೆ ಕುಷ್ಠರೋಗ ನಿರ್ಮೂಲನೆಗೆ ವಿಶೇಷ ಒತ್ತು ನೀಡಬೇಕು ಎಂದು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಲ್. ಆರ್. ಶಂಕರ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಜಿಲ್ಲಾ ಆರಿ್ಸ.ಎಚ್ ಅಧಿಕಾರಿಗಳಾದ ಡಾ. ಜಂಬಯ್ಯ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸತೀಶ್ ಚಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ, ಶಸ್ತ್ರಚಿಕಿತ್ಸಕರಾದ ಡಾ. ಹರಿಪ್ರಸಾದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ. ಪಿ. ದೊಡ್ಡಮನಿ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 