ಬೆಳೆ ಹಾನಿಯಾದ ಸ್ಥಳಗಳಿಗೆ ಅಧಿಕಾರಿಗಳು ಭೇಟಿ, ಪರೀಶೀಲನೆ
Officials visit and inspect crop damage areas
ಯರಗಟ್ಟಿ, 02 ; ಮಳೆಯಿಂದ ರೈತರಿಗೆ ಉಂಟಾಗಿರುವ ಬೆಳೆ ಹಾನಿ ಪರಿಹಾರ ಒದಗಿಸಿಕೊಡುವ ಸಂಬಂಧ ಯರಗಟ್ಟಿ ತಾಲೂಕಿನ ವಿವಿಧ ಗ್ರಾಮಗಳಿಗೆ ತಹಸೀಲ್ದಾರ್ ಎಂ. ವ್ಹಿ. ಗುಂಡಪ್ಪಗೋಳ ಹಾಗೂ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಪ್ರಕಾಶ ಪಾಟೀಲ ಭೇಟಿ ನೀಡಿ ಪರೀಶೀಲಿಸಿದರು.
ಯರಗಟ್ಟಿ ಸ್ಥಳೀಯ, ಸತ್ತಿಗೇರಿ, ಗುಡುಮಕೇರಿ, ಬೂದಿಗೋಪ್ಪ, ಗ್ರಾಮದಲ್ಲಿ ಮಳೆಯಿಂದ ಬೆಳೆ ಹಾನಿಯಾದ ಸ್ಥಳಗಳಿ ಶುಕ್ರವಾರ ಭೇಟಿ ನೀಡಿದ ತಹಸೀಲ್ದಾರ್ ತಹಶೀಲ್ದಾರ ಎಮ್ ವ್ಹಿ. ಗುಡಪ್ಪಗೋಳ ಮಾತನಾಡಿ, ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಸತತವಾಗಿ ಬಿದ್ದ ಮಳೆಯಿಂದಾಗಿ ರೈತರು ನಾಟಿ ಮಾಡಿದ್ದ ಹೆಸರು, ಉದ್ದು, ಸೊಯಾಬೀನ್ ಸೇರಿದಂತೆ ತೋಟಗಾರಿಕೆಯ ಹೂವು, ಉಳ್ಳಾಗಡ್ಡಿ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ.
ಈ ಸಂದರ್ಭದಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರಮೇಶ ಹವರಡ್ಡಿ, ಕೃಷಿ ಅಧಿಕಾರಿ ಎಸ್.ಎಲ್. ದೇಸಾಯಿ, ಕಂದಾಯ ನೀರೀಕ್ಷಕ ವಾಯ್ ಎಫ್ ಮುರ್ತೇಣ್ಣವರ, ಗ್ರಾಮ ಆಡಳಿತಾಧಿಕಾರಿ ಎ.ಬಿ. ಹುಣಶ್ಯಾಳ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆಯಲಾಯಿತು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 