ಮತದಾರರ ಪಟ್ಟಿ ಶುದ್ಧತೆಗೆ ಅಧಿಕಾರಿಗಳ ಮನೆಮನೆ ಭೇಟಿ

ಮತದಾರರ ಪಟ್ಟಿ ಶುದ್ಧತೆಗೆ ಅಧಿಕಾರಿಗಳ ಮನೆಮನೆ ಭೇಟಿ  Officials visit houses to ensure cleanliness of voter list

ಗದಗ 30: ವಿಶೇಷ ಸಾಂದ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತವಾಗಿಸಲು ಅಧಿಕಾರಿಗಳು ಮನೆಮನೆ ಭೇಟಿ ಮೂಲಕ ಪರೀಶೀಲನೆ ನಡೆಸುತ್ತಿದ್ದಾರೆ.  

ಜುಲೈ 6ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ಮತದಾರರ ಹೆಸರು ಪರೀಶೀಲನೆ, ತಿದ್ದುಪಡಿ, ಹೊಸ ಹೆಸರು ಸೇರೆ​‍್ಡ ಹಾಗೂ ಅನರ್ಹ ಹೆಸರುಗಳನ್ನು ತೆಗೆದುಹಾಕುವ ಕಾರ್ಯ ನಡೆಯುತ್ತಿದೆ. 2002ರ ಮತದಾರರ ಪಟ್ಟಿಯನ್ನು ಆಧಾರವಾಗಿಟ್ಟುಕೊಂಡು ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆ ನಡೆಯುತ್ತಿದೆ.  

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಬೂತ್ ಮಟ್ಟದ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಸಾರ್ವಜನಿಕರು ತಮ್ಮ ಮತದಾರರ ವಿವರಗಳನ್ನು ಪರೀಶೀಲಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಮನವಿ ಮಾಡಲಾಗಿದೆ. ಪಾರದರ್ಶಕ ಮತ್ತು ವಿಶ್ವಾಸಾರ್ಹ ಮತದಾರ ಪಟ್ಟಿ ಸಿದ್ಧಪಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.