ದಿ. 12 ಶನಿವಾರದಂದು ವೃದ್ಧಾಪ್ಯ ಸುಖ ವಿನೂತನ ಕಾರ್ಯಕ್ರಮ
Old Age Happiness Innovation Program on Saturday
ಬೆಳಗಾವಿ 10: ನಗರದ ಹಾಸ್ಯಕೂಟ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೇ ದಿ. 12 ಶನಿವಾರದಂದು ಸಾಯಂಕಾಲ 4. 30ಕ್ಕೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನ ಸಭಾಭವನದಲ್ಲಿ ‘ವೃದ್ಧಾಪ್ಯ ಸುಖ’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಎಲ್. ಎಸ್. ಶಾಸ್ತ್ರಿ, ಹಿರಿಯ ಸಾಹಿತಿ ಬಿ. ಎಸ್. ಗವಿಮಠ, ಹಿರಿಯ ಕವಿ ಪ್ರೊ. ಎಂ. ಎಸ್. ಇಂಚಲ ಹಾಗೂ ಖ್ಯಾತ ವಾಗ್ಮಿಗಳಾದ ಡಾ. ಬಸವರಾಜ ಜಗಜಂಪಿಯವರು ವೃದ್ಧಾಪ್ಯ ಜೀವನದ ರಸಪ್ರಸಂಗಗಳನ್ನು ಹಂಚಿಕೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ನ್ಯಾಯವಾದಿ ಎಸ್. ಎಂ. ಕುಲಕರ್ಣಿಯವರು ವಹಿಸಲಿದ್ದು ಪ್ರಾಯೋಜಕತ್ವವನ್ನು ನಿವೃತ್ತ ಪ್ರಾಚಾರ್ಯ ಪ್ರಿ. ವ್ಹಿ. ಎನ್. ಜೋಶಿಯವರು ವಹಿಸಿಕೊಳ್ಳಲಿದ್ದಾರೆ. ಪ್ರಾಸ್ತಾವಿಕ ನುಡಿಯನ್ನು ಗುಂಡೆನಟ್ಟಿ ಮಧುಕರ ಆಡಲಿದ್ದು ಜಿ. ಎಸ್. ಜೋನಾರ ನಿರೂಪಿಸಲಿದ್ದಾರೆ.
ಈ ವಿನೂತನ ಕಾರ‌್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹಾಸ್ಯಪ್ರಿಯರು ಬರುವಂತೆ ರಾಮಚಂದ್ರ ಕಟ್ಟಿ ಮತ್ತು ತಾನಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 