ವಯಸ್ಸಿನಿಂದಲ್ಲ, ಅನುಭವದಿಂದ ವೃದ್ಧಾಪ್ಯ: ಡಾ. ಸರಸ್ವತಿ ಕಳಸದ
Old age is not due to age, but to experience: Dr. Saraswati Kalasada
ಲೋಕದರ್ಶನ ವರದಿ
ವಯಸ್ಸಿನಿಂದಲ್ಲ, ಅನುಭವದಿಂದ ವೃದ್ಧಾಪ್ಯ: ಡಾ. ಸರಸ್ವತಿ ಕಳಸದ
ಹುಕ್ಕೇರಿ 09: ವೃದ್ಧಾಪ್ಯ ಎನ್ನುವುದು ಕೇವಲ ವಯಸ್ಸಿನಿಂದ ಬರುವುದಿಲ್ಲ, ಅದು ಅನುಭವದಿಂದ ಮಾತ್ರ ಸಾಧ್ಯ ಎಂದು ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಸರಸ್ವತಿ ಕಳಸದ ಅಭಿಪ್ರಾಯಪಟ್ಟರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮಿನಲ್ಲಿರುವ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ, ಭಾರತ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಪ್ರಾದೇಶಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ, ನೈಟಿಂಗೇಲ್ಸ್ ವೈಧ್ಯಕೀಯ ಟ್ರಸ್ಟ್, ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಹಾಗೂ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಜರುಗಿದ ಹಿರಿಯ ನಾಗರಿಕರಿಗಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಡಾ. ಸರಸ್ವತಿ ಕಳಸದ ಅವರು ಹಿರಿಯ ನಾಗರಿಕರು ಸಮಾಜದಲ್ಲಿ ಇರುವಷ್ಟು ದಿನ ಹಸನ್ಮುಖಿಗಳಾಗಿ ಬದುಕಬೇಕು ಎಂದು ಸಲಹೆ ನೀಡಿದರು. ಅಲ್ಲದೆ, ಎಂ. ಎಸ ಚೌಗಲಾ ಕುಟುಂಬದ ಸಮಾಜ ಸೇವೆಯು ಭವಿಷ್ಯದ ಪೀಳಿಗೆಗೆ ದಾರೀದೀಪವಾಗಬೇಕು ಎಂದು ಹರ್ಷ ವ್ಯಕ್ತಪಡಿಸಿದರು. ಹಿಂದಿನ ವೃದ್ಯಾಪ್ಯ ಜೀವನವನ್ನು ನೆನಪಿಸಿಕೊಳ್ಳುತ್ತಾ, ಈ ಹಿಂದೆ ವೃದ್ಧಾಪ್ಯ ಎನ್ನುವುದು ನಡೆದಿದ್ದೆಲ್ಲಾ ಆಟದ ಅಂಗಳವಾಗಿತ್ತು, ಮಾತಾಡಿದ್ದೆಲ್ಲವೂ ಮನರಂಜನೆಯಾಗಿತ್ತು, ಆದರೆ ಈಗ ಕಾಲ ಬದಲಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಅತಿಥಿಗಳಾಗಿ ಆಗಮಿಸಿದ್ದ ಹುಕ್ಕೇರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಚ್. ಹೊಳೆಪ್ಪ ಅವರು ಹಿರಿಯ ನಾಗರಿಕರಿಗಾಗಿ ಸರ್ಕಾರವು ಜಾರಿಗೆ ತಂದಿರುವ ಅನೇಕ ಯೋಜನೆಗಳ ಕುರಿತು ಸವಿವರವಾಗಿ ವಿವರಿಸಿದರು. ಬೆಂಗಳೂರಿನ ನೈಟಿಂಗೇಲ್ಸ್ ವೈದ್ಯಕೀಯ ಟ್ರಸ್ಟ್ನ ಅಧಿಕಾರಿಗಳಾದ ಸುರೇಶ್ ಬಾಬು ಹಾಗೂ ಪ್ರವೀಣ ಅವರು ಕಾರ್ಯಕ್ರಮದ ಉದ್ದೇಶದ ಕುರಿತು ಸಂಕ್ಷಿಪ್ತವಾಗಿ ಮಾತನಾಡಿದರು.
ಮಹಿಳಾ ಕಲ್ಯಾಣ ಸಂಸ್ಥೆಯ ಸಂಸ್ಥಾಪಕ ಎಂ.ಎಸ್. ಚೌಗಲಾ ಅವರು ತಮ್ಮ ಸಂಸ್ಥೆಯು ನಡೆದು ಬಂದ ಹಿನ್ನಲೆ ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಿವಿಧ ವೃದ್ಧಾಶ್ರಮಗಳ ಸ್ಥಾಪನೆಯ ಕುರಿತು ವಿವರಿಸಿದರು. ಬೆಳಗಾವಿಯ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ವಿಶ್ರಾಂತ ಉಪ ನಿರ್ದೇಶಕರಾದ ಆರಿ್ಬ. ಬನಶಂಕರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ನಿವೃತ್ತ ಶಿಕ್ಷಕ ಬಿ .ಎಸ್. ಮಾನೆ ಪ್ರಾರ್ಥಿಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಸ್ವಾಗತಿಸಿದರು. ಯರಗಟ್ಟಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ವಿಭಾಗದ ಪ್ರಾಚಾರ್ಯರಾದ ಕಿರಣ ಚೌಗಲಾ ಪ್ರಾಸ್ತಾವಿಕ ಹಾಗೂ ಅತಿಥಿ ಪರಿಚಯ ನೆರವೇರಿಸಿದರು.
ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗುರ್ಪ ತಳವಾರ, ಪದವಿ ಹಾಗೂ ಪದವಿ ಪೂರ್ವ ವಿಭಾಗಗಳ ಪ್ರಾಚಾರ್ಯರು, ಹುಕ್ಕೇರಿ ತಾಲೂಕ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ಎಸ್.ಬಿ. ಸೇಬಣ್ಣವರ, ಹಿರಿಯ ಸಾಹಿತಿಗಳಾದ ಎಸ್.ಎಂ. ಶಿರೂರ, ಪ್ರಕಾಶ್ ಹೊಸಮನಿ, ಜಯಶ್ರೀ ಮತ್ತಿಕೊಪ್ಪ ಸೇರಿದಂತೆ ಅಥಣಿ, ಚಿಕ್ಕೋಡಿ, ಗೋಕಾಕ್, ರಾಯಬಾಗ, ಬೆಳಗಾವಿ, ಖಾನಾಪುರ ಸೇರಿದಂತೆ ವಿವಿಧೆಡೆಗಳಿಂದ ನೂರಾರು ಹಿರಿಯ ನಾಗರಿಕರು ಪಾಲ್ಗೊಂಡಿದ್ದರು.
ಕ್ರೀಡೆ ಮತ್ತು ಸಾಂಸ್ಕೃತಿಕ ರಸ ದೌತಣ: ಕಾರ್ಯಕ್ರಮದ ನಂತರ ಮಹಾವಿದ್ಯಾಲಯದ ಆವರಣದಲ್ಲಿ ಲಿಂಬು ಚಮಚ, ಸಂಗೀತ ಕುರ್ಚಿ, ಮಡಿಕೆ ಒಡೆಯುವ ಸ್ಪರ್ಧೆ, ವೇಗದ ನಡಿಗೆ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳು ಜನರನ್ನು ಮನರಂಜಿಸಿದವು. ಮಧ್ಯಾಹ್ನದ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು ಭಾವಗೀತೆ, ಜಾನಪದ ಗೀತೆ, ಭಕ್ತಿ ಗೀತೆ, ಡೊಳ್ಳಿನ ಪದ, ಭಜನಾಪದ, ಸಂಗ್ಯಾ ಬಾಳ್ಯಾ ನಾಟಕ ಪ್ರದರ್ಶನ ಹಾಗೂ ವೀರಗಾಸೆ ಕುಣಿತದಂತಹ ಸಾಂಸ್ಕೃತಿಕ ಪ್ರದರ್ಶನಗಳನ್ನು ನೀಡಿದರು. ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ಬಹುಮಾನ ವಿತರಣೆ ಹಾಗೂ ಸತ್ಕಾರ ನಡೆಯಿತು.
ಕಾರ್ಯಕ್ರಮವನ್ನು ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ನಿರೂಪಕ ಚೇತನ ಕುಲಕರ್ಣಿ ಹಾಗೂ ಆಶ್ರಯ ಸ್ವಾಧಾರ ಗೃಹ, ಶಕ್ತಿ ಸದನ ಹಿಡಕಲ್ ಡ್ಯಾಮ್ನ ಸಿಬ್ಬಂದಿ ಸುಗಂಧ ಅಲಟ್ಟಿ ನಿರೂಪಿಸಿದರು. ಉಪನ್ಯಾಸಕ ಎ.ವೈ. ಸೋನ್ಯಾಗೋಳ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 