ಶವ ಸಾಗಿಸುವ ಹಳೆ ವಾಹನ ಬೆಂಕಿಗಾಹುತಿ
Old hearse gutted by fire
ಲಕ್ಷ್ಮೇಶ್ವರ, ಸೆ. 26: ಪಟ್ಟಣದ ಪುರಸಭೆ ಆವರಣದಲ್ಲಿ ಶವ ಸಾಗಿಸುವ ಹಳೆಯ ವಾಹನಕ್ಕೆ ಶನಿವಾರ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ವಾಹನದಲ್ಲಿದ್ದ ವೈರ್ಗಳು ಶಾರ್ಟ್ ಸರ್ಕ್ಯೂಟ್ಗೆ ಒಳಗಾದ ಪರಿಣಾಮ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಪುರಸಭೆ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸಪಟ್ಟರು. ಆದರೆ ಬೆಂಕಿಯ ತೀವ್ರತೆ ಹೆಚ್ಚಾದ ಪರಿಣಾಮ ವಾಹನ ಸಂಪೂರ್ಣವಾಗಿ ಸುಟ್ಟುಹೋಯಿತು.
ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವ ಕುರಿತು ಪುರಸಭೆ ಸಿಬ್ಬಂದಿ ಅಗ್ನಿಶಾಮಕ ಇಲಾಖೆಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಅಷ್ಟರಲ್ಲಾಗಲೇ ವಾಹನಕ್ಕೆ ಅಪಾರ ಪ್ರಮಾಣದ ಹಾನಿ ಸಂಭವಿಸಿತ್ತು. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದಲೇ ಬೆಂಕಿ ಹೊತ್ತಿಕೊಂಡಿತೇ ಅಥವಾ ಬೇರೆ ಕಾರಣವಿದೆಯೇ ಎಂಬುದರ ಕುರಿತು ಪರೀಶೀಲನೆ ನಡೆಯುತ್ತಿದೆ.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 