ಜೆಇಇ ಅಡ್ವಾನ್ಸ್ನಲ್ಲಿ ಸಾಧನೆ ಮಾಡಿದ ಓಂಕಾರ ಹುನಗುಂದಗೆ ಸನ್ಮಾನ
Omkara Hunagunda felicitated for his achievement in JEE Advanced
ಲೋಕದರ್ಶನ ವರದಿ
ಹುಬ್ಬಳ್ಳಿ 30: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಪ್ರೊ. ಬಿ.ಎಸ್. ಹುನಗುಂದ ಅವರ ನಿವಾಸದಲ್ಲಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಓಂಕಾರ ಬಸವರಾಜ ಹುನಗುಂದ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಪಿಯುಸಿ ಪರೀಕ್ಷೆಯಲ್ಲಿ ಶೇ. 95.3 ಅಂಕಗಳನ್ನು ಗಳಿಸಿರುವ ಓಂಕಾರ, ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ರ್ಯಾಂಕ್ ಪಡೆದು ರಾಜಸ್ಥಾನದ ಜೋಧಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಲ್ಲಿ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಬಿ.ಟೆಕ್ ಪದವಿಗೆ ಪ್ರವೇಶ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಓಂಕಾರ ಅವರಿಗೆ ಶಾಲು ಹೊದಿಸಿ, ಮಾಲಾರೆ್ಣ ಮಾಡಿ, ಗ್ರಂಥಗಳನ್ನು ನೀಡಿ ಗೌರವಿಸಿ ಅಭಿನಂದಿಸಲಾಯಿತು.
ಸನ್ಮಾನ ಸ್ವೀಕರಿಸಿದ ಓಂಕಾರ ಅವರಿಗೆ ಶುಭ ಹಾರೈಸಿದ ಡಾ. ಸುರೇಶ ಡಿ. ಹೊರಕೇರಿ, ವಿದ್ಯಾರ್ಥಿಯ ಸಾಧನೆ ಹೆಮ್ಮೆ ತರುವಂತದ್ದಾಗಿದ್ದು, ತಂತ್ರಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದುಕೊಡಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ ಪ್ರೊ. ಎಸ್.ಎಂ. ಸಾತ್ಮಾರ, ಉಪಾಧ್ಯಕ್ಷ ಚೆನ್ನಬಸಪ್ಪ ಧಾರವಾಡಶೆಟ್ಟರ್, ಡಾ. ಸುರೇಶ ಡಿ. ಹೊರಕೇರಿ, ಓಂಕಾರ ಅವರ ತಂದೆ ಪ್ರಾಧ್ಯಾಪಕ ಡಾ. ಬಸವರಾಜ ಶ್ರೀಶೈಲಪ್ಪ ಹುನಗುಂದ, ತಾಯಿ ದಂತ ವೈದ್ಯೆ ಡಾ. ಕಾವೇರಿ ಬಸವರಾಜ ಹುನಗುಂದ, ಸಹೋದರಿ ದಂತ ವೈದ್ಯೆ ಡಾ. ಅದಿತಿ ಬಸವರಾಜ ಹುನಗುಂದ, ಹಿರಿಯ ಸಾಹಿತಿ ಸುನಿತಾ ಹುಬ್ಳಿಕರ್, ಆಯುರ್ವೇದ ವೈದ್ಯ ಡಾ. ಬಸವಕುಮಾರ ತಲವಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 