ಸರ್ವಜ್ಞರು ಶೇಷ್ಠ ವಚನಕಾರರು: ಮೇಯರ್ ಮುಲ್ಲಂಗಿ ನಂದೀಶ್‌

Omniscient Speaker: Mayor Mullangi Nandish

ಸರ್ವಜ್ಞರು ಶೇಷ್ಠ ವಚನಕಾರರು: ಮೇಯರ್ ಮುಲ್ಲಂಗಿ ನಂದೀಶ್‌

ಬಳ್ಳಾರಿ 20: ಸಂತಕವಿ ಸರ್ವಜ್ಞರು ಸರ್ವರಲ್ಲಿ ಬೆರೆತು ಕಲಿತ ನಂತರ ಶ್ರೇಷ್ಠ ವಚನಕಾರರಾದವರು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಏರಿ​‍್ಡಸಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 16 ನೇ ಶತಮಾನದ ವಚನಯುಗದ ತ್ರಿಪದಿ ಬ್ರಹ್ಮ ಸಂತ ಸರ್ವಜ್ಞನು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಮ್ಮ ತ್ರಿಪದಿ ವಚನದ ಮೂಲಕ ತಿದ್ದಿ ಸಮಾನತೆ ಸಾರಿದವರು ಎಂದರು.ಸರ್ವಜ್ಞನು ವಚನಕಾಲದ ಶ್ರೇಷ್ಠ ದಾರ್ಶನಿಕ ವಚನಕಾರರಲ್ಲಿ ಒಬ್ಬರಾಗಿದ್ದಾರೆ. ಗಾದೆ ಮಾತಿನಂತೆ ಆಡು ಮುಟ್ಟದ ಸೊಪ್ಪಿಲ್ಲ, ಸರ್ವಜ್ಞರು ರಚಿಸದ ವಚನಗಳಿಲ್ಲ ಎಂದು ತಿಳಿಸಿದರು.ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಬಿ.ಸಿದ್ಧಲಿಂಗಪ್ಪ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಸರ್ವಜ್ಞರ ತ್ರಿಪದಿ ವಚನಗಳು ನಮ್ಮ ಜೀವನಕ್ಕೆ ಮಾರ್ಗದರ್ಶನವಾಗಿದೆ. ಒಗ್ಗಟ್ಟು, ಒಮ್ಮತ, ಐಕ್ಯತೆ ಭಾವನೆಯಿಂದ ಕೂಡಿ ಬಾಳ್ವೆ ನಡೆಸಬೇಕು ಎಂದು ತಿಳಿಸಿಕೊಟ್ಟವರು ಎಂದರು.ತಾಯಿ ಕುಂಬಾರ ಮಾಳೆ ಮತ್ತು ತಂದೆ ಬಸವರಸ ಮಗನಾಗಿ ಸರ್ವಜ್ಞ ಜನಿಸಿದ್ದು ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಅಂಬಲೂರು ಗ್ರಾಮದಲ್ಲಿ. ಇದು ಈಗ ಸರ್ವಜ್ಞನ ಅಬಲೂರು ಎಂದೇ ಪ್ರಸಿದ್ಧಿ ಪಡೆದಿದೆ. ಸರ್ವಜ್ಞನ ತ್ರಿಪದಿಗಳು ತಮ್ಮ ಸರಳತೆ ಮತ್ತು ಪ್ರಾಸಬದ್ಧತೆಯಿಂದ ಜನಪ್ರಿಯವಾಗಿವೆ. ಈ ತ್ರಿಪದಿಗಳು ಮುಖ್ಯವಾಗಿ ನೈತಿಕ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳನ್ನು ಕುರಿತವುಗಳಾಗಿವೆ. ಸುಮಾರು 1,000 ತ್ರಿಪದಿಗಳು ಸರ್ವಜ್ಞನ ಹೆಸರಿನಲ್ಲಿ ದಾಖಲಾಗಿವೆ ಎಂದರು.ಕಾರ್ಯಕ್ರಮದಲ್ಲಿ ಸಂಡೂರಿನ ಟಿ.ವೆಂಕಟೇಶ್  ತಂಡದಿಂದ ವಚನ ಗಾಯನ ಪ್ರಸ್ತುತ ಪಡಿಸಿದರು ಹಾಗೂ ಕೆ.ಖುಷಿ ಅವರಿಂದ ಭರತನಾಟ್ಯ ನೃತ್ಯ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಎಮ್‌.ಗೋವಿಂದರಾಜುಲು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಕೊಟ್ರೇಶ್,  ಜಿಲ್ಲಾ ಶಾಲಿವಾಹನ ಕುಂಬಾರರ ಸಂಘದ ಅಧ್ಯಕ್ಷ ಕೆ.ರಂಗಸ್ವಾಮಿ ಸೇರಿದಂತೆ ಸಮಾಜದ ಮುಖಂಡರು, ಜನ ಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು. *ಸಡಗರದ ಮೆರವಣಿಗೆ:*ಸಂತಕವಿ ಸರ್ವಜ್ಞ ಜಯಂತಿ ಅಂಗವಾಗಿ ಏರಿ​‍್ಡಸಿದ್ದ ಮೆರವಣಿಗೆಯು ಸಡಗರದಿಂದ ನಡೆಯಿತು.  ಮೆರವಣಿಗೆಯು ನಗರದ ರಾಜ್‌ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ- ಜಿಲ್ಲಾಧಿಕಾರಿ ಕಚೇರಿ ರಸ್ತೆ-ರೈಲ್ವೇ ಸ್ಟೇಷನ್ ರಸ್ತೆ- ಹೆಚ್‌.ಆರ್‌.ಗವಿಯಪ್ಪ ವೃತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಸಾಗಿ ಬಂದು ಅಂತ್ಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿ ಮೆರಗು ನೀಡಿದವು.