ಡಿ. 26ರಂದು ‘ಸವಾಯಿ ಮಲ್ಲಸರ್ಜ’ ಕೃತಿ ಲೋಕಾರ್ಪಣೆ
On 26th, the work 'Sawai Mallasarja' was launched
ಲೋಕದರ್ಶನ ವರದಿ
ಧಾರವಾಡ 25: ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಇಟಗಿ-ಶಾಂತಗಿರಿಯ ದೇಸಾಯಿ ಕುಟುಂಬಸ್ಥರ ಆಶ್ರಯದಲ್ಲಿ, ವಿಜಯಕುಮಾರಸರ್ಜ ಶಿ. ದೇಸಾಯಿ ಅವರು ರಚಿಸಿರುವ ‘ಸವಾಯಿ ಮಲ್ಲಸರ್ಜ’ (ಕಿತ್ತೂರ ಸಂಸ್ಥಾನದ ದತ್ತು ಪುತ್ರ ಮಾಸ್ತಮರ್ಡಿಯ ಶಿವಲಿಂಗಪ್ಪ ಅವರ ಕುರಿತಾದ ಕೃತಿ) ಗ್ರಂಥದ ಲೋಕಾರೆ್ಣ ಸಮಾರಂಭವು ಡಿ 26, ಶುಕ್ರವಾರ ಹಮ್ಮಿಕೊಳ್ಳಲಾಗಿದೆ.
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 11 ಕ್ಕೆ ಕಾರ್ಯಕ್ರಮ ನಡೆಯಲಿದೆ.
ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನಮಠದ ಪರಮಪೂಜ್ಯ ಜಗದ್ಗುರು ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸನ್ನಿಧಾನ ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಪರಮಪೂಜ್ಯ ಮ.ನಿ.ಪ್ರ. ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಪರಮಪೂಜ್ಯ ಶಾಂತಲಿಂಗಸ್ವಾಮಿಗಳು ಹಾಗೂ ಇಟಗಿ ಭೀಮಾಂಬಿಕಾದೇವಿ ಮಠದ ಪೂಜ್ಯ ಷಣ್ಮುಖಪ್ಪಜ್ಜ ಧರ್ಮರ ಅವರು ಸಮ್ಮುಖ ವಹಿಸಿ ಆಶೀರ್ವಚನ ನೀಡಲಿದ್ದಾರೆ.
ಕಿತ್ತೂರು ಸಂಸ್ಥಾನದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಈ ಮಹತ್ವದ ಕೃತಿಯ ಬಿಡುಗಡೆಗೆ ಸಾಹಿತ್ಯಾಭಿಮಾನಿಗಳು, ಇತಿಹಾಸ ತಜ್ಞರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ದೇಸಾಯಿ ಕುಟುಂಬಸ್ಥರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 