ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ನ್ಯಾಯಮೂರ್ತಿ ಅಮೋಲ್ ಜೆ ಹೀರೆಕುಡಿ

ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ನ್ಯಾಯಮೂರ್ತಿ ಅಮೋಲ್ ಜೆ ಹೀರೆಕುಡಿ  On July 12, National Lok Adalat Justice Amol J Hirekudi

ಬ್ಯಾಡಗಿ 20  : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜುಲೈ 12 ರಂದು ಬ್ಯಾಡಗಿ ಜೆ ಎಂ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್‌’ ನಡೆಯಲಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಜೆ ಹೀರೆಕುಡಿ ಹೇಳಿದರು.

ಪಟ್ಟಣದ ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಮಾತನಾಡಿದವರು    ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಬಹುದು.ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲಾಗುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) , ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.ಸಿವಿಲ್ ನ್ಯಾಯಾಧೀಶ ಸುರೇಶ ವಗ್ಗನವರ ಮಾತನಾಡಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು.ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ.ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು.

ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.  ಈ ವೇಳೆ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ ರಾಜಣ್ಣ.ನ್ಯಾಯವಾದಿ ಸಂಘದ ಅಧ್ಯಕ್ಷ ರಾಜು ಶೀಡೆನೂರ.ಉಪಾಧ್ಯಕ್ಷ ಜಿ ಬಿ ಯಲಗಚ್ಚ. ಹಿರಿಯ ನ್ಯಾಯವಾದಿಗಳಾದ ವಿ ಎಸ್ ಕಡಿಗಿ.ಎಂ ಪಿ ಹಂಜಗಿ.ನಿಂಗಪ್ಪ ಬತ್ತಲಕಟ್ಟಿ . ಹಾಗೂ ಅನೇಕ ಹಿರಿಯ ನ್ಯಾಯವಾದಿಗಳು ಉಪಸ್ಥಿತರಿದ್ದರು..