ಛಾಯಾಚಿತ್ರ ವಸ್ತು ಪ್ರದರ್ಶನಕ್ಕೆ ಸಂಸದ ಸಂಗಣ್ಣ ಚಾಲನೆ


ಕೊಪ್ಪಳ 12: ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೊಪ್ಪಳ ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಆಯೋಜಿಸಲಾದ "ಸರ್ಕಾರದ ನೂರು ದಿನದ ಸಾಧನೆ ಮತ್ತು ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಕೈಗೊಂಡ ಕ್ರಮಗಳ" ಕುರಿತಾದ ಛಾಯಾಚಿತ್ರ ವಸ್ತು ಪ್ರದರ್ಶನಕ್ಕೆ ಕೊಪ್ಪಳ ಸಂಸದ ಕರಡಿ  ಸಂಗಣ್ಣ ಅವರು ರಿಬ್ಬನ್ ಕಟ್ ಮಾಡುವುದರ ಮೂಲಕ  ಇಂದು (ಜನವರಿ. 12) ಚಾಲನೆ ನೀಡಿದರು.

ಸಂಸದ ಕರಡಿ  ಸಂಗಣ್ಣ ಅವರು ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ರಚನೆಯಾದ ರಾಜ್ಯ ಸರ್ಕಾರವು ನೂರು ದಿನಗಳನ್ನು ಪೂರೈಸಿದ್ದು, ಈ ಸಮಯದಲ್ಲಿ ನೇಕಾರರ ಹಾಗೂ ಮೀನುಗಾರರ ಸಾಲಮನ್ನಾ, ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ ರೂ. 6 ಸಾವಿರಗಳನ್ನು ನೀಡುವ ಕಾರ್ಯಕ್ರಮಕ್ಕೆ ರೂ. 4 ಸಾವಿರಗಳನ್ನು ಹೆಚ್ಚುವರಿಯಾಗಿ ನೀಡುವ ರಾಜ್ಯ ಸರ್ಕಾರದ ಸಾಧನೆ ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಂಟಾದ ಪ್ರವಾಹದ ಸಂದರ್ಭದಲ್ಲಿ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಕೈಗೊಂಡ ಕ್ರಮಗಳನ್ನು ಪ್ರದರ್ಶಿಸುವ ಮೂಲಕ ಜನ ಸಾಮಾನ್ಯರಿಗೆ ಮಾಹಿತಿ ತಲುಪಿಸುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಈ ಕಾರ್ಯಕ್ರಮ ವಿಶೇಷವಾಗಿದೆ.  ಎಲ್ಲಾ ಸಾರ್ವಜನಿಕರು ಕೊಪ್ಪಳ ನಗರದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಈ ಛಾಯಾಚಿತ್ರ ವಸ್ತು ಪ್ರದರ್ಶನವನ್ನು ವೀಕ್ಷಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಛಾಯಾಚಿತ್ರ ವಸ್ತು ಪ್ರದರ್ಶನದಲ್ಲಿ: ಪ್ರವಾಹ ಸಂತ್ರಸ್ತರ ನೋವಿಗೆ ಮಿಡಿದ ಸರ್ಕಾರ, ಜನಹಿತಕ್ಕಾಗಿ ಸರ್ಕಾರ, ಮೀನುಗಾರರ ಸಾಲಮನ್ನಾ, ನೇಕಾರರ ಸಾಲಮನ್ನಾ, ಸಾಮೂಹಿಕ ವಿವಾಹ ಕಾರ್ಯಕ್ರಮ, ಅಭಿವೃದ್ಧಿಯ ಪಥದಲ್ಲಿ ಕರ್ನಾಟಕ, ಕಲ್ಯಾಣ ಕರ್ನಾಟಕ ಪರ್ವಕ್ಕೆ ಚಾಲನೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಕೊಡುಗೆ ಸೇರಿದಂತೆ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳಡಿ ಮಾಡಿದ ಸಾಧನೆ ಬಗ್ಗೆ ಛಾಯಾಚಿತ್ರಯುಳ್ಳ ಮಾಹಿತಿ ಇದೆ.

ವಾರ್ತಾ  ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಎಂ. ಅವಿನಾಶ, ಗಣ್ಯರಾದ ರಶೀದ್ಸಾಬ ಮೀಠಾಯಿ ಸೇರಿದಂತೆ ಇಲಾಖೆಯ ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.