ಎಂ ಎಂ ಹಿಲ್ಸ್ ರಸ್ತೆಯಲ್ಲಿ ವಾಹನ ನಿಲ್ಲಿಸುವವರಿಗೆ ಸ್ಥಳದಲ್ಲೇ ದಂಡ: ಅರಣ್ಯ ಇಲಾಖೆ ಬಿಗಿ ಕ್ರಮ
ಚಾಮರಾಜನಗರ, ಜ 7 ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವುದರ ಮೂಲಕ ನಿಯಮಗಳನ್ನು ಉಲ್ಲಂಘಿಸುವವರಿಗೆ 2,000 ರೂ. ದಂಡ ವಿಧಿಸುವ ಬಿಗಿ ಕ್ರಮವನ್ನು ಅರಣ್ಯ ಇಲಾಖೆ ತೆಗೆದುಕೊಂಡಿದೆ ಎಂದು ಅರಣ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಎಚ್ಚರಿಕೆಯ ಫಲಕಗಳನ್ನು ಹಾಕಲಾಗಿದ್ದರೂ, ವಾಹನಗಳಲ್ಲಿ ತೆರಳುವ ಜನರು ರಸ್ತೆಯಲ್ಲೇ ವಾಹನ ನಿಲ್ಲಿಸಿ ವನ್ಯ ಜೀವಿಗಳ ಚಿತ್ರಗಳನ್ನು ತೆಗೆಯುವುದು, ಸೆಲ್ಫಿಗಳನ್ನು ತೆಗೆಯುವುದನ್ನು ಮುಂದುವರೆಸುವುದರ ಮೂಲಕ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ರಸ್ತೆ ಅಪಘಾತಗಳನ್ನು ತಡೆಯಲು ಮತ್ತು ವನ್ಯಜೀವಿಗಳ ಮೇಲಿನ ದಾಳಿಗಳನ್ನು ತಡೆಯುವ ಪ್ರಯತ್ನವಾಗಿ ಅರಣ್ಯ ಇಲಾಖೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದೆ. ಇದು ಜ 1ರಿಂದ ಜಾರಿಗೆ ಬರಲಿದ್ದು, ಗಸ್ತು ತೀವ್ರಗೊಳಿಸಲಾಗಿದೆ ಎಂದು ಮಲೆ ಮಹದೇಶ್ವರ ಬೆಟ್ಟ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕೊಂಡಲು ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 