ನವದೆಹಲಿ 17: ತೀವ್ರ ಚರ್ಚೆಯ ಬಳಿಕ ‘ಒಂದು ದೇಶ, ಒಂದು ಚುನಾವಣೆ’ ಮಸೂದೆಯು ಲೋಕಸಭೆಯಲ್ಲಿ ಮಂಗಳವಾರ ಮಂಡನೆಯಾಯಿತು.
ಒಂದು ದೇಶ, ಒಂದು ಚುನಾವಣೆ ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲೋಕಸಭೆಯಲ್ಲಿ ಮಂಡಿಸಿದರು.
ಇದು 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಮುಖ ಚುನಾವಣಾ ಸುಧಾರಣೆಗೆ ಬಿಜೆಪಿ ದಾರಿ ಮಾಡಿಕೊಟ್ಟಿದೆ. ಆದಾಗ್ಯೂ, ಈ ಮಸೂದೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ವಾದಿಸುತ್ತಿದ್ದಾರೆ.
ಬಳಿಕ ಮಸೂದೆಯ ಒಪ್ಪಿಗೆ ಪಡೆಯಲು ಮಂತಯಂತ್ರದ ಮೂಲಕ ನಡೆದ ಮತ ಚಲಾವಣೆ ಪ್ರಕ್ರಿಯೆಯಲ್ಲಿ 269 ಸದಸ್ಯರು ಮಸೂದೆಯ ಪರವಾಗಿ ಹಾಗೂ 198 ಸದಸ್ಯರು ವಿರೋಧವಾಗಿ ಮತ ಹಾಕಿದ್ದಾರೆ.
ಹೊಸ ಸಂಸತ್ ಭವನದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಯಿತು.