ಚರಸ್ ಮಾದಕ ಪದಾರ್ಥ ಅಕ್ರಮವಾಗಿ ಮಾರಾಟ; ಓರ್ವನ ಬಂಧನ
One arrested for illegally selling charas drug
ಧಾರವಾಡ ನ.12: ಚಿಕ್ಕಮಲ್ಲಿಗವಾಡ ಕ್ರಾಸ್ ಬಸ್ ಸ್ಟ್ಯಾಂಡ್ ಹತ್ತಿರ ನವೆಂಬರ್ 11, 2025 ರಂದು 13:15 ಗಂಟೆಗೆ ಒಬ್ಬ ಚರಸ್ ಮಾದಕ ಪದಾರ್ಥವನ್ನು ಅಕ್ರಮವಾಗಿ ಮಾರಾಟ ಮಾಡಲು ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಾನಂದ ಕಟಗಿ, ಧಾರವಾಡ ಗ್ರಾಮೀಣ ಉಪವಿಭಾಗದ ಡಿ.ಎಸ್.ಪಿ ವಿನೋದ ಮುಕ್ತೇದಾರ, ಪೊಲೀಸ್ ಇನ್ಸಪೆಕ್ಟರ್ ಎಸ್. ಎಸ್. ಕಮತಗಿ ಅವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಪ್ರವೀಣ ಕೋಟಿ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ಕೈಕೊಂಡು ಆರೋಪಿತನಾದ ಅಕೀಲಅಹ್ಮದ್ ತಂದೆ ಕುತುಬುದ್ದಿನ್ ಮುನವಳ್ಳಿ ಸಾಃ ನೆಹರುನಗರ, ಅಳ್ನಾವರ, ಧಾರವಾಡ ಜಿಲ್ಲೆ ಈತನಿಂದ 220 ಗ್ರಾಂ ಅಂದಾಜು ಮೌಲ್ಯ 80000 ರೂಗಳ ಚರಸ್ ಮಾದಕ ಪದಾರ್ಥವನ್ನು ವಶಪಡಿಸಿಕೊಂಡಿದ್ದು, ಈ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 260/2025 ಕಲಂ 20(ಬಿ)(2)(ಬಿ) ಎನ್.ಡಿ.ಪಿ.ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆಚಿುರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 