ಬೆಂಗಳೂರು, ಏ.8, ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರ, ಆಧಿಕಾರಿಗಳ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಗೆ ನೀಡಲು ನಿರ್ಧರಿಸಲಾಗಿದೆ. ಕೋವಿಡ್-19 ಅನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿರುವ ಹಿನ್ನೆಲೆಯಲ್ಲಿ ಹಾಗೂ ಕೊರೊನಾ ವೈರಸ್ ನಿರ್ಮೂಲನೆಗಾಗಿ ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬಿಎಂಟಿಸಿ, ಈಶಾನ್ಯ ಹಾಗೂ ವಾಯವ್ಯ ಸಾರಿಗೆ ಸಂಸ್ಥೆಗಳಿಂದ ದೇಣಿಗೆ ನೀಡಲಾಗುತ್ತಿದೆ.ಆಯಾ ನಿಗಮದ ವ್ಯಾಪ್ತಿಯ ನೌಕರರು ಹಾಗೂ ಅಧಿಕಾರಿಗಳ ಏಪ್ರಿಲ್ ತಿಂಗಳ ವೇತನದಲ್ಲಿ ಕಟಾವು ಮಾಡಿ ಮುಖ್ಯಮಂತ್ರಿಗಳ ನಿಧಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.