ಕಬ್ಬಿನಲ್ಲಿ ಕೃಷಿ ತ್ಯಾಜ್ಯಗಳ ಮರು ಬಳಕೆ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ
One-day training program for farmers on the reuse of agricultural waste in sugarcane
ನೇಸರಗಿ 11: ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ ಹಾಗೂ ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕಬ್ಬಿನಲ್ಲಿ ಕೃಷಿ ತ್ಯಾಜ್ಯಗಳ ಮರು ಬಳಕೆ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ
ಡಾ. ಮಂಜುನಾಥ ಚೌರಡ್ಡಿಯವರು ಕಬ್ಬಿನ ಬೆಳೆಯಲ್ಲಿ ಕೃಷಿ ತ್ಯಾಜ್ಯಗಳನ್ನು ಮರು ಬಳಕೆ ಮಾಡುವುದರಿಂದ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು, ಕಳೆಗಳನ್ನು, ಬರವನ್ನು ಕಡಿಮೆಯಾಗುತ್ತದೆ. ಆದ್ದರಿಂದ ಕಬ್ಬು ಬೆಳೆಗಾರರು ಕಟಾವಾದ ಕಬ್ಬಿನ ಬೆಳೆಯಲ್ಲಿ ರವದೆಯನ್ನು ಸುಡದೇ ಮರು ಬಳಕೆ ಮಾಡಿ ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ದೊರಕುವ ರವದೆಯನ್ನು ಕಳಿಸುವ ಜೈವಿಕ ಗೊಬ್ಬರವನ್ನು ಬಳಸುವುದರಿಂದ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಬಹುದೆಂದು ಹೇಳಿದರು.
ಕೃಷಿ ಸಂಶೋಧನಾ ಕೇಂದ್ರ, ಸಂಕೇಶ್ವರದ ಹಿರಿಯ ವಿಜ್ಞಾನಿ ಡಾ. ಎಸ್. ಎಸ್. ನೂಲಿಯವರು ಕಬ್ಬಿನಲ್ಲಿ ಕೃಷಿ ತ್ಯಾಜ್ಯಗಳ ಮರುಬಳಕೆ ಮತ್ತು ರವದೆ ನಿರ್ವಹಣೆಯ ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡಿದರು. ಕೇಂದ್ರದ ತೋಟಗಾರಿಕೆ ವಿಜ್ಞಾನಿ ಪ್ರವೀಣ ಯಡಹಳ್ಳಿ ಕಾರ್ಯಕ್ರಮದಲ್ಲಿ ನಿರೂಪಿಸಿದರು. ಬೆಳಗಾವಿ ಜಿಲ್ಲೆಯ 45 ಕಬ್ಬು ಬೆಳೆಗಾರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 