ಬೆಳಗಾವಿ, 26: ಕೊಟ್ಪಾ 2003ರ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಮಾಡುವಲ್ಲಿ ಎಲ್ಲಾ ಇಲಾಖೆಗಳ ಪಾತ್ರ ಮಹತ್ವದಾಗಿದ್ದು, ಕಾರ್ಯಕ್ರಮದ ಅನುಷ್ಠಾನಕ್ಕೆ ಸಹಕಾರ ನೀಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳಾದ ಡಾ. ಎಸ್.ವಿ ಮುನ್ಯಾಳ ಅವರು ಹೇಳಿದರು.
ಸೆಪ್ಟಂಬರ್ 25 ರಂದು ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಬ್ಲೂಂಬರ್ಗ ಇನಿಷಿಯೆಟಿವ್ ಯೋಜನೆ ಅಡಿಯಲ್ಲಿ ಮಹಾನಗರ ಪಾಲಿಕೆಯ ಹಿರಿಯ, ಕಿರಿಯ ಆರೋಗ್ಯ ನೀರೀಕ್ಷಕರುಗಳಿಗೆ "ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಹಾಗೂ ಕೊಟ್ಪಾ 2003ರ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ತರಬೇತಿ ಕಾಯರ್ಾಗಾರದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಕೆ ಹೆಚ್ ಅವರು ಮಾತನಾಡಿ, ಕೊಟ್ಪಾ 2003ರ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ಪಾತ್ರ ಮಹತ್ವದಾಗಿದ್ದು, ಕಾನೂನು ಉಲ್ಲಂಘನೆ ಮಾಡುವವರ ವಿರುದ್ದ ನಿದರ್ಾಕ್ಷಣ್ಯ ಕ್ರಮವಹಿಸಿ ತಂಬಾಕು ಮುಕ್ತ ಬೆಳಗಾವಿ ನಗರವನ್ನಾಗಿಸಬೇಕೆಂದು ಕರೆ ನೀಡಿದರು.
ಯುವಪೀಳಿಗೆಯು ತಂಬಾಕು ಸೇವನೆಗೆ ಬಲಿಯಾಗದಂತೆ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಹೇಳಿದರು.
ಕಾರ್ಯಕ್ರಮದ ಪ್ರಾಸ್ತವಿಕ ನುಡಿಯನ್ನು ಜಿಲ್ಲಾ ಸವರ್ೇಕ್ಷಣಾಧಿಕಾರಿಗಳಾದ ಡಾ. ಬಿ ಎನ್ ತುಕ್ಕಾರ ಅವರು ಮಾತನಾಡಿ ಕಾರ್ಯಗಾರದ ಮಹತ್ವವನ್ನು ತಿಳಿಸಿದರು. ಕಾರ್ಯಗಾರದಲ್ಲಿ ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ. ಶಶಿಧರ ನಾಡಗೌಡ, ಅವರು ಮಾತನಾಡಿ ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನ ಮಾಡುವಲ್ಲಿ ಮಹಾನಗರ ಪಾಲಿಕೆಯ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.
ಕಾರ್ಯಗಾರರ ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕರಾದ ಮಹಾಂತೇಶ್ ಉಳ್ಳಾಗಡ್ಡಿ ಅವರು ಕೊಟ್ಪಾ 2003ರ ಕಾಯ್ದೆಯ ನಿಯಮಗಳ ಕುರಿತು ಅರಿವು ಮೂಡಿಸಿದರು. ಹಾಗೂ ದಂತ ವೈದ್ಯರಾದ ಡಾ. ದೀಪಾ ಮಗದುಮ್ ರವರು ತಂಬಾಕು ಸೇವನೆಂಯಿಂದಾಗುವ ದುಷ್ಪರಿಣಾಗಳ ಕುರಿತು ಅರಿವು ಮೂಡಿಸಿದರು.
ಕಾರ್ಯಗಾರದಲ್ಲಿ ಹಿರಿಯ, ಕಿರಿಯ ಆರೋಗ್ಯ ನಿರೀಕ್ಷಕರುಗಳು ಹಾಗೂ ಪರಿಸರ ಅಭಿಯಂತರರು ಹಾಜರಿದ್ದರು. ಸಮಾಜ ಕಾರ್ಯಕರ್ತರಾದ ಕವಿತಾ ರಾಜನ್ನವರ ನಿರೂಪಿಸಿದರು ಹಾಗೂ ಡಾ. ಶ್ವೇತಾ ಪಾಟೀಲ ಸ್ವಾಗತಿಸಿದರು. ಆಪ್ತ ಸಮಾಲೋಚಕರಾದ ಆಶಾ ಹಿರೇಮಠ ಅವರು ವಂದಿಸಿದರು.