ಫೋಟೋಗ್ರಫಿ ಕೌಶಲ್ಯಗಳ ಕುರಿತ ಒಂದು ದಿನದ ಕಾರ್ಯಾಗಾರ
One-day workshop on photography skills
ವಿಜಯಪುರ, 10 : ಒಂದು ಚಿತ್ರ ಸಾವಿರ ಪದಗಳಿಗೆ ಸಮವಾಗಿದ್ದು, ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ, ವಿಜಯಾ.ಬಿ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಹಾಗೂ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ‘ಫೋಟೋಗ್ರಫಿ ಕೌಶಲ್ಯಗಳ’ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಫೋಟೋಗ್ರಫಿ ಕಲೆ, ವಿಜ್ಞಾನ ಮತ್ತು ತಂತ್ರಜ್ಞಾನಗಳ ಸಮ್ಮಿಶ್ರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಫೋಟೋಗ್ರಫಿಗೆ ಮಹತ್ವ ಹೆಚ್ಚಾಗಿದ್ದು, ಫೋಟೋಗ್ರಫಿಯ ವಿಭಿನ್ನ ಕೌಶಲ್ಯಗಳನ್ನು ತಿಳಿದುಕೊಂಡು ಹೆಚ್ಚಿನ ಜ್ಞಾನವನ್ನು ಹೊಂದುವುದು ಅಗತ್ಯ. ಫೋಟೋಗ್ರಫಿ ತರಬೇತಿಯಿಂದ ಪಡೆದ ತಿಳುವಳಿಕೆಯನ್ನು ಬಳಸಿಕೊಂಡು ವಿದ್ಯಾರ್ಥಿನಿಯರು ಸಬಲೀಕರಣದತ್ತ ಮುಂದುವರಿಯಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಇಂದಿನ ಯುವ ಪೀಳಿಗೆ ಫೋಟೋ ತೆಗೆಯುವ ಕ್ರೇಝ್‌ನಲ್ಲಿ ಅನೇಕ ಅನಾಹುತಗಳನ್ನು ಎದುರಿಸುತ್ತಿದೆ. ಆದರೆ ಇದೇ ಸಮಯದಲ್ಲಿ ಫೋಟೋಗ್ರಫಿ ಕ್ಷೇತ್ರದಲ್ಲಿ ವಿಶಾಲವಾದ ಉದ್ಯೋಗಾವಕಾಶಗಳು ಹೆಚ್ಚುತ್ತಿವೆ. ಡಿಜಿಟಲ್ ಯುಗದಲ್ಲಿ ಫೋಟೋಗ್ರಫಿ ಕೌಶಲ್ಯ ಕಲಿಯುವುದು ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ವಿವಿಧ ಕಲೆ ಮತ್ತು ಕೌಶಲ್ಯಗಳನ್ನು ಅಳವಡಿಸಿಕೊಂಡು ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಎಂದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಫೋಟೋಗ್ರಫಿ ಪ್ರತಿಯೊಬ್ಬರ ಜೀವನದಲ್ಲೂ ಪ್ರಮುಖ ಪಾತ್ರವಹಿಸುತ್ತಿದೆ. ವಿವಿಧ ಭಾವನೆಗಳನ್ನು ಅಚ್ಚುಕಟ್ಟಾಗಿ ಸೆರೆಹಿಡಿಯುವ ಸಾಮರ್ಥ್ಯ ಫೋಟೋಗೆ ಮಾತ್ರ ಸಿಗುತ್ತದೆ. ವಿದ್ಯಾರ್ಥಿನಿಯರು ವೈವಿಧ್ಯಮಯ ಫೋಟೋಗ್ರಫಿ ಕೌಶಲ್ಯಗಳನ್ನು ಕಲಿತು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ 100 ಕ್ಕೂ ಅಧಿಕ ವಿವಿಧ ವಿಭಾಗದ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಹಿರಿಯ ನೋಡಲ್ ಅಧಿಕಾರಿ ಪ್ರೊ. ಜಿ ಬಿ ಸೋನಾರ್, ವಿವಿಧ ವಿಭಾಗದ ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತಿತರಿದ್ದರು.
ವಿಭಾಗದ ಕಾರ್ಯಾಗಾರದ ಸಂಯೋಜಕ ಹಾಗೂ ಸಹಾಯಕ ಪ್ರಾಧ್ಯಾಪಕ ಸಂದೀಪ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಅತಿಥಿ ಉಪನ್ಯಾಸಕಿ ಸುಷ್ಮಾ ಪವಾರ ನಿರೂಪಿಸಿದರು. ಸಂಶೋಧನಾ ವಿದ್ಯಾರ್ಥಿನಿಯರಾದ ಜಯಶ್ರೀ ತಳವಾರ್ ಸ್ವಾಗತಿಸಿದರು, ಪವಿತ್ರಾ ಕಂಬಾರ ವಂದಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 