ತಮ್ಮ ಹುಟ್ಟುಹಬ್ಬವನ್ನು ಸಸಿ ನೆಡುವ ಮೂಲಕ ಆಚರಿಸಬೇಕು: ಸೋಮನಾಳ
One should celebrate one's birthday by planting a sapling: Somanala
ವಿಜಯಪುರ 06: ಎಲ್ಲಾ ವಿದ್ಯಾರ್ಥಿನಿಯರು ತಮ್ಮ ಹುಟ್ಟುಹಬ್ಬವನ್ನು ಸಸಿ ನೆಡುವ ಮೂಲಕ ಆಚರಿಸಬೇಕು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ಅಧ್ಯಯನ ಹಾಗೂ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗ ಹಾಗೂ ಭಾರತೀಯ ವಿಜ್ಞಾನ ಕಾಂಗ್ರೇಸ್ ಅಸೋಸಿಯೇಷನ್ ವಿಜಯಪುರ ಚಾಪ್ಟರ್ ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ವಿಶ್ವ ಪರಿಸರ ದಿನಾಚಾರಣೆ’ಯನ್ನು ಸಸಿ ನೇಡುವ ಮೂಲಕ ಉದ್ಘಾಟಿಸಿದರು.
ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸುತ್ತಾ, ವಿದ್ಯಾರ್ಥಿನಿಯರಲ್ಲಿ ಪರಿಸರದ ಮೇಲಿನ ಜವಾಬ್ದಾರಿಯ ನಂಬಿಕೆಯನ್ನು ಬಿತ್ತಿದರು. ವಿದ್ಯಾರ್ಥಿಗಳು ವಿವಿಧ ಆಯಾಮಗಳಲ್ಲಿ ಉದಾಹರಣೆಗೆ ನೀರು ಸಂರಕ್ಷಣೆ, ಕಸದ ವಿಂಗಡನೆ, ಹಸಿರು ಪರಿಸರ ನಿರ್ಮಾಣ ಮುಂತಾದ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಸಂಯೋಜಕ ಡಾ. ಬಾಬು.ಆರ್.ಎಲ್. ಪ್ರಾಸ್ತಾವಿಕ ನುಡಿಗಳನ್ನಾಡಿ ಎಲ್ಲರನ್ನು ಸ್ವಾಗತಿಸಿದರು. ಎಲ್ಲ ವಿದ್ಯಾರ್ಥಿನಿಯರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು ಹಾಗೂ ಪರಿಸರವನ್ನು ಸಂರಕ್ಷಿಸಲು ಪ್ರಮಾಣ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 