ಗದಗ: ಉತ್ತಮ ಪರಿಸರ ಹಾಗೂ ಸಾರ್ವಜನಿಕ ಆರೋಗ್ಯ ಹಿತ ದೃಷ್ಟಿಯಿಂದ ಒಂದು ಬಾರಿ ಉಪಯೋಗಿಸುವ ಪ್ಲಾಸ್ಟಿಕ್ ಬಳಕೆಯನ್ನು ತುಜಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ, ಇದಕ್ಕಾಗಿ ಅಕ್ಟೋಬರ್ 2ರವರೆಗೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಗದಗ ಜಿಲ್ಲೆಯ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನಾಂದೋಲನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಗದಗ ಜಿಲ್ಲೆಯ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲ ತಾಲೂಕು ಹಾಗೂ ಗ್ರಾಮ ಪಂಚಾಯತಗಳ ಹಾಗೂ ಜಿ.ಪಂ ವ್ಯಾಪ್ತಿಯ ಇಲಾಖೆಗಳ ಹಾಕಿಕೊಳ್ಳಬೇಕಾದ ಕಾರ್ಯಕ್ರಮಗಳನ್ನು ಸುತ್ತೋಲೆಯಲ್ಲಿ ತಿಳಿಸಿದ್ದು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಆಂದೋಲನದ ಅವಧಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಅನ್ನು ಸಂಗ್ರಹಿಸಲು ತಾಲೂಕು ಹಾಗೂ ಗ್ರಾ.ಪಂಗಳು ಶೇಖರಣಾ ಸ್ಥಳ ಗೊತ್ತುಪಡಿಸಬೇಕು. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಹಾಗೂ ಪ್ಲಾಸ್ಟಿಕ್ ತ್ಯಜಿಸಲು ಸಾರ್ವಜಿನಿಕ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಈ ಕಾರ್ಯಕ್ರಮಗಳ ಛಾಯಾಚಿತ್ರ ವಿಡಿಯೋ ಸಂಬಂಧಿತ ವಾಟ್ಸಪ್ ಹಾಗೂ ಮೇಲ್ ಗೇ ಅಪಲೋಡ್ ಮಾಡಬೇಕು ಹಾಗೂ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳನ್ನು ಕಾರ್ಯಕ್ರಮಗಳಿಗೆ ಆಹ್ವಾನಿಸಿ ಪ್ಲಾಸ್ಟಿಕ್ ತ್ಯಜಿಸುವ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ವ್ಯಾಪಕ ಪ್ರಚಾರ ದೊರಕುವಂತೆ ಕ್ರಮ ವಹಿಸಲು ಮುಖ್ಯ ಕಾರ್ಯನಿವರ್ಾಹಣಾಧಿಕಾರಿಗಳು ನಿದರ್ೇಶನ ನೀಡಿದ್ದಾರೆ.