ಬೆಂಗಳೂರು, ಏ 21,ಮಹಾಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಇಂದು ಕಲಬುರಗಿ ಜಿಲ್ಲೆಯ ನಿವಾಸಿಯಾಗಿದ್ದ 80 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಇವರು ಕಳೆದ 4 ವರ್ಷಗಳಿಂದ ಪಾರ್ಕಿಸನ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಮೂರು ವರ್ಷಗಳಿಂದ ಹಾಸಿಗೆಯಲ್ಲಿ ಮಲಗಿಯೇ ಜೀವನ ಸಾಗಿಸುತ್ತಿದ್ದರು. ಏ. 19ರಂದು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ರಾಜ್ಯದಲ್ಲಿ ಮತ್ತೆ 7 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 415ಕ್ಕೇರಿಕೆಯಾಗಿವೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 114 ಜನರು ಗುಣಮುಖರಾಗಿದ್ದಾರೆ. ಕಲಬುರಗಿಯಲ್ಲಿ ಮೂರು ಹೊಸ ಪಪ್ರಕರಣಗಳು ಪತ್ತೆಯಾಗಿವೆ. 30,61 ಹಾಗೂ 80 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ವಿಜಯಪುರದ 18 ವರ್ಷದ ಇಬ್ಬರು ಯುವತಿಯರು, ಬಂಟ್ವಾಳ ದಕ್ಷಿಣ ಕನ್ನಡ ಜಿಲ್ಲೆಯ 67 ವರ್ಷದ ವೃದ್ಧೆಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.